ಶಿವಮೊಗ್ಗ: ‘ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಜ. 21ರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಮಟ್ಟದ ‘ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ’ ಆಯೋಜಿಸಲಾಗಿದೆ’ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕಾರ್ಯಾಗಾರಕ್ಕೆ ಪ್ರತಿ ತಾಲ್ಲೂಕುಗಳಿಂದ ಫಲಾನುಭವಿಗಳು ಬರಲಿದ್ದಾರೆ. ಅವರೊಂದಿಗೆ ಸಂವಾದ ಇದ್ದು, ಯಶೋಗಾಥೆಗಳ ಪ್ರದರ್ಶನವಿರುತ್ತದೆ’ ಎಂದರು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸುವರು. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಕಿರುಹೊತ್ತಿಗೆ ಬಿಡುಗಡೆ ಮಾಡುವರು. ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಉಪಸ್ಥಿತರಿರುವರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು ಎಂದು ಮಾಹಿತಿ ನೀಡಿದರು.

ಅಂದು ಬೆಳಿಗ್ಗೆ 10 ಗಂಟೆಗೆ ಗೋಪಿ ವೃತ್ತದಿಂದ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸ್ತಬ್ಧ ಚಿತ್ರಗಳ ಮೆರವಣಿಗೆ ಆರಂಭವಾಗಲಿದ್ದು, ಕುವೆಂಪು ರಂಗಮಂದಿರ ತಲುಪಲಿದೆ ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಶಿವಣ್ಣ, ಇಕ್ಕೇರಿ ರಮೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧು, ಸದಸ್ಯ ಎಂ.ರಾಹುಲ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.