ಸಾಗರ: ಇಲ್ಲಿನ ವರದಹಳ್ಳಿ ರಸ್ತೆಯಲ್ಲಿರುವ ವನಶ್ರೀ ವಿದ್ಯಾಸಂಸ್ಥೆ ಆವರಣದಲ್ಲಿ ಆ. 11ರಂದು ಜಿಲ್ಲಾಮಟ್ಟದ ಯೋಗಾಸನ ಕ್ರೀಡಾ ಸ್ಪರ್ಧೆ ನಡೆಯಲಿದೆ ಎಂದು ವನಶ್ರೀ ಸಂಸ್ಥಾಪಕ ಎಚ್.ಪಿ.ಮಂಜಪ್ಪ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 8ಕ್ಕೆ ಸ್ಪರ್ಧೆ ಆರಂಭಗೊಳ್ಳಲಿದ್ದು, ಒಟ್ಟು 5 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ಆಯ್ಕೆಯಾದವರು ರಾಜ್ಯಮಟ್ಟದ ಸ್ಪರ್ಧೆಗೆ ಪಾಲ್ಗೊಳ್ಳಲು ಅರ್ಹತೆ ಪಡೆಯುತ್ತಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ, ಶಿವಮೊಗ್ಗ ಜಿಲ್ಲಾ ಯೋಗಾಸನ ಸಂಸ್ಥೆ, ಯೋಗಾಸನ ಭಾರತ್ ಸಂಸ್ಥೆಗಳ ಸಹಯೋಗದಲ್ಲಿ ಸ್ಪರ್ಧೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಯೋಗ ಕಾಲೇಜಿನ ಉದ್ಘಾಟನೆ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.