ಬುಧವಾರ, ಆಗಸ್ಟ್ 17, 2022
30 °C

ಖಾಸಗಿ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಆಯುರ್ವೇದ ವೈದ್ಯರಿಗೆ ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ಕಲ್ಪಿಸಿರುವ ಕೇಂದ್ರದ ಸರ್ಕಾರದ ನಡೆ ಖಂಡಿಸಿ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಶುಕ್ರವಾರ ಹೊರ ರೋಗಿಗಳ ವಿಭಾಗ ಬಂದ್‌ ಮಾಡಿ ಪ್ರತಿಭಟನೆ ದಾಖಲಿಸಿದವು.

ಕೇಂದ್ರ ಸರ್ಕಾರ ಸ್ನಾತಕೋತ್ತರ ಆಯುರ್ವೇದ ಶಿಕ್ಷಣ ತಿದ್ದುಪಡಿ ಅಧಿಸೂಚನೆ ಹೊರಡಿಸಿ, ಕೆಲವು ಶಸ್ತ್ರ ಚಿಕಿತ್ಸೆ ಕೈಗೊಳ್ಳಲು ಆಯುಷ್‌ ವೈದ್ಯರಿಗೆ ಅವಕಾಶ ಕಲ್ಪಿಸಿದೆ. ಆದರೆ, ಆಯುರ್ವೇದಲ್ಲಿ ಹೇಗೆ ಶಸ್ತ್ರ ಚಿಕಿತ್ಸೆ ಮಾಡಲು ಸಾಧ್ಯ? ಇಲ್ಲಿ ಅರಿವಳಿಕೆ ಮದ್ದುಗಳು ಇವೆಯೇ ಎಂದು ಅಲೋಪತಿ ವೈದ್ಯರು ಪ್ರಶ್ನಿಸಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಕರೆಯ ಮೇರೆಗೆ ಮುಷ್ಕರ ಬೆಂಬಲಿಸಿದ್ದಾರೆ.

ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಸಂಜೆ 6ರವರೆಗೆ ಹೊರರೋಗಿಗಳ ಸೇವೆ ಸ್ಥಗಿತಗೊಳಿಸಲಾಗಿತ್ತು. ಖಾಸಗಿ ಆಸ್ಪತ್ರೆಗಳ ಈ ನಿರ್ಧಾರದಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗಗಳು ಪರದಾಡಿದರು. ಖಾಸಗಿ ಆಸ್ಪತ್ರೆಗಳ ಮುಷ್ಕರದ ಪರಿಣಾಮ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆದರು. ಜನರ  ಆರೋಗ್ಯ ಸೇವೆಗೆ ಸಮಸ್ಯೆಯಾಗದಂತೆ ರಜೆ ಪಡೆದ ವೈದ್ಯರನ್ನು ಮರಳಿ ಕರೆಸಲಾಗಿತ್ತು. ಹೆಚ್ಚುವರಿ ವೈದ್ಯರನ್ನು ಬಳಸಿಕೊಳ್ಳಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.