ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಭದ್ರತೆಗೆ ಗುತ್ತಿಗೆ ವೈದ್ಯರು, ಸಿಬ್ಬಂದಿ ಆಗ್ರಹ

Last Updated 6 ಅಕ್ಟೋಬರ್ 2020, 10:54 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ,ಹೊರಗುತ್ತಿಗೆ ನೌಕರರ ಸಂಘದಸದಸ್ಯರುವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರಜಿಲ್ಲಾಧಿಕಾರಿ ಕಚೇರಿಮುಂದೆಪ್ರತಿಭಟನೆ ನಡೆಸಿದರು.

ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆಸಕಾಲಕ್ಕೆವೇತನ ನೀಡಲು ಕ್ರಮಕೈಗೊಳ್ಳಬೇಕು.ನೌಕರರಿಗೆ ಸೇವಾ ಭದ್ರತೆ ನೀಡಿ, ಕೆಲಸ ಕಾಯಂಗೊಳಿಸಬೇಕು. ಎಲ್ಲ ಹುದ್ದೆಗಳನ್ನೂಕಾಯಂ ಹುದ್ದೆಗಳಾಗಿ ಸೃಷ್ಟಿಸಬೇಕು. ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಬಜೆಟ್ ಶೇಕಡಾವಾರು ಹೆಚ್ಚಿಸಬೇಕು. ಆರೋಗ್ಯ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಬೇಕು. ಕೇಂದ್ರ ಸರ್ಕಾರಅಗತ್ಯ ಆರ್ಥಿಕ ನೆರವು ನೀಡಬೇಕು.ಗುತ್ತಿಗೆ, ಹೊರಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿಗೆಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಮಧ್ಯವರ್ತಿಗಳಿಗೆ ಅವಕಾಶವಿಲ್ಲದೇ ನೇರವಾಗಿ ಇಲಾಖೆಯೇವೇತನ ಪಾವತಿ ಮಾಡಬೇಕು. ಒಳಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಿಗುವ ಸೌಲಭ್ಯಗಳು ಹೊರಗುತ್ತಿಗೆ ನೌಕರರಿಗೂ ನೀಡಬೇಕು.ಪರಸ್ಪರ ವರ್ಗಾವಣೆ, ಖಾಲಿ ಇರುವ ಜಾಗದಲ್ಲಿ ಸಾಮಾನ್ಯ ವರ್ಗಾವಣೆಗೆ ಅವಕಾಶ ನೀಡಬೇಕು.ಕಾಯಂ ನೇಮಕಾತಿ ನಂತರವೂಕೆಲಸದಿಂದ ತೆಗೆಯಬಾರದು. ಅಗತ್ಯವಾಗಿ ಸ್ಥಳ ಬದಲಾವಣೆ ಮಾಡಬಾರದುಎಂದು ಕೋರಿದರು.

ಬೇಡಿಕೆ ಈಡೇರಿಕೆಗಾಗಿಹಲವುವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಸರ್ಕಾರ ಗಮನಹರಿಸಿಲ್ಲ.ಹಾಗಾಗಿ,ಸೆ.24ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡುತ್ತಿದ್ದು, 13ನೇ ದಿನಕ್ಕೆ ಮುಂದುವರಿದಿದೆ. ಸರ್ಕಾರದ ವಿಳಂಬ ಧೋರಣೆಯಿಂದ ನೌಕರರು ವಿಧಿಯಿಲ್ಲದೇ ಮುಷ್ಕರದ ಹಾದಿ ಹಿಡಿಯಬೇಕಾಗಿದೆ.ಬೇಡಿಕೆ ಈಡೇರದ ಹೊರತು ಮುಷ್ಕರ ಹಿಂಪಡೆಯುವುದಿಲ್ಲ ಎಂದರು.

ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆಮನವಿ ಸಲ್ಲಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಡಾ.ಹೇಮಲತಾ, ಡಾ.ಶಂಕ್ರಪ್ಪ, ಡಾ.ಸುಪ್ರಿಯಾ, ಡಾ.ಮಹೇಶ್, ಡಾ.ರಾಘವೇಂದ್ರ
ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT