ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚದಿರಿ: ಜೆಡಿಯು ಆಗ್ರಹ

Last Updated 28 ಜನವರಿ 2023, 6:35 IST
ಅಕ್ಷರ ಗಾತ್ರ

ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಆಗ್ರಹಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ವಿಐಎಸ್‌ಎಲ್ ಕಾರ್ಖಾನೆ ಸಾವಿರಾರು ಜನರಿಗೆ ಬದುಕು ನೀಡಿದೆ. ಗುತ್ತಿಗೆ ಕಾರ್ಮಿಕರು, ಕಾಯಂ ಕೆಲಸಗಾರರು, ಅಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ನಿವೃತ್ತ ನೌಕರರೂ ಕಾರ್ಖಾನೆಯ ಕ್ವಾರ್ಟರ್ಸ್‌ಗಳಲ್ಲಿ ವಾಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಈಗ ಕಾರ್ಖಾನೆಯನ್ನು ನಷ್ಟದ ನೆಪವೊಡ್ಡಿ ಮುಚ್ಚಲು ಆದೇಶ ಮಾಡಿದೆ. ಇದರಿಂದ ಸಾವಿರಾರು ಕಾರ್ಮಿಕರು ಬೀದಿಗೆ ಬರುತ್ತಾರೆ ಎಂದು ಅವರು ದೂರಿದರು.

‘ಪಕ್ಷಾತೀತವಾಗಿ ಈ ಕಾರ್ಖಾನೆ ಉಳಿಸಬೇಕಾಗಿದೆ. ಎಲ್ಲಾ ಪಕ್ಷದ ಚುನಾಯಿತ ಪ್ರತಿನಿಧಿಗಳು, ಶಾಸಕರು, ಕ್ರೀಡಾಪಟುಗಳು, ಸಂಘ–ಸಂಸ್ಥೆಗಳು ಸೇರಿ ಪ್ರಧಾನಿ ಬಳಿ ನಿಯೋಗ ಹೋಗಬೇಕು. ಇಲ್ಲದಿದ್ದರೆ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಖಾನೆ ಉಳಿಸಲು ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT