ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸಬೇಡಿ’

Last Updated 22 ಜನವರಿ 2022, 4:29 IST
ಅಕ್ಷರ ಗಾತ್ರ

ಶಿಕಾರಿಪುರ:ಸಮಾಜದ ಜನರ ಅಭಿವೃದ್ಧಿಗೆ ಶ್ರಮಿಸಿದ ಹಾಗೂ ಸಂದೇಶ ನೀಡಿದ ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಸಲಹೆ ನೀಡಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಗಂಗಾ ಮತಸ್ಥರ ಸಮಾಜ ಆಶ್ರಯದಲ್ಲಿ ನಡೆದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣ, ಅಂಬಿಗರ ಚೌಡಯ್ಯ,ಕನಕದಾಸರು ಸೇರಿ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಹಲವು ದಾರ್ಶನಿಕರನ್ನು ಜಾತಿಗೆ ಸೀಮಿತಗೊಳಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಅಂಬಿಗರ ಚೌಡಯ್ಯ ತಮ್ಮ ನೇರ ನುಡಿಯ ಮೂಲಕ ಜನರ ತಪ್ಪುಗಳನ್ನು ತಿದ್ದುವ ಕೆಲಸ ಮಾಡಿದರು. ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೊಳಗಿ ರೇವಣಪ್ಪ, ತಹಶೀಲ್ದಾರ್ ಎಂ.ಪಿ. ಕವಿರಾಜ್, ರಾಜ್ಯ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಬಸವರಾಜ ಕಪ್ಪನಹಳ್ಳಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಸುರೇಶನಾಯ್ಕ, ಎ. ಪರಮೇಶ್ವರಪ್ಪ, ಕವಲಿ ಸುಬ್ರಮಣ್ಯ, ಮುಖಂಡರಾದ ಶಿವಣ್ಣ, ಚಂದ್ರಶೇಖರ್, ಶೇಖರಪ್ಪ, ವಿನಯ್, ಕಿರಣ್, ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT