ಬುಧವಾರ, ಸೆಪ್ಟೆಂಬರ್ 22, 2021
23 °C

ರಂಗಕರ್ಮಿ ಹಾಲಪ್ಪ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಇಲ್ಲಿನ ಉದಯ ಕಲಾವಿದರು ಸಂಸ್ಥೆಯ ಹಿರಿಯ ರಂಗಕರ್ಮಿ ಹಾಲಪ್ಪ (80) ಬುಧವಾರ ವಿನೋಬ ನಗರ ಬಡಾವಣೆಯ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಅಂತ್ಯಸಂಸ್ಕಾರ ಬುಧವಾರ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.

ಉದಯ ಕಲಾವಿದರು ರಂಗ ತಂಡದಲ್ಲಿ ದೀರ್ಘಕಾಲ ಕೆಲಸ ಮಾಡಿದ ಹಾಲಪ್ಪ ಅವರು ‘ಏನ ಬೇಡಲಿ ನಿನ್ನ ಬಳಿಗೆ ಬಂದು’, ‘ಕತ್ತಲೆ ಬೆಳಕು’, ‘ಪ್ರಪಂಚ ಪಾಣಿಪತ್’, ‘ಸೌಭಾಗ್ಯವತಿ ಭವ’, ‘ ರಂಗ ಭಾರತ’, ‘,ಮೂರು ಕಾಸಿನ ಆಟ’, ‘ ಉತ್ತಮ ಪ್ರಭುತ್ವ ಲೊಳಲೊಟ್ಟೆ’ ಸೇರಿ ಹಲವು ನಾಟಕಗಳಲ್ಲಿ ಅಭಿನಯಿಸಿದ್ದರು.

ನಟನೆಯ ಜೊತೆಗೆ ರಂಗಭೂಮಿಯಲ್ಲಿ ಸಂಘಟಕರಾಗಿಯೂ ಅವರು ಹೆಸರು ಮಾಡಿದ್ದರು. ಹವ್ಯಾಸಿ ರಂಗತಂಡಗಳು ಯಾವ ರೀತಿ ತಮ್ಮ ತಂಡದ ಲೆಕ್ಕಪತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ರಂಗ ಪರಿಕರಗಳನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎನ್ನುವುದನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದರಲ್ಲಿ ಅವರು ಸಿದ್ಧಹಸ್ತರಾಗಿದ್ದರು. ಇಲ್ಲಿನ ಸಾಂಸ್ಕೃತಿಕ ಸಂಘಟನೆ ‘ಒಡನಾಟ’ದಲ್ಲೂ ಅವರು ಸಕ್ರಿಯರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು