ಭಾನುವಾರ, ಸೆಪ್ಟೆಂಬರ್ 19, 2021
26 °C

ಡ್ರಗ್ಸ್ ಪ್ರಕರಣ: ನಿಷ್ಟಕ್ಷಪಾತ ತನಿಖೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಡ್ರಗ್ಸ್ ಪ್ರಕರಣ ಕುರಿತು ನಿಷ್ಪಕ್ಷಪಾತ ತನಿಖೆ ಮಾಡಬೇಕು ಎಂದು ಆಗ್ರಹಿಸಿ ಬುಧವಾರ ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಾದಕ ವಸ್ತುಗಳ ಸೇವನೆ, ಸಾಗಣೆ ಮತ್ತು ಪೂರೈಕೆಯ ನೂರಾರು ಪ್ರಕರಣಗಳ ವರದಿಯಾಗುತ್ತಿದ್ದು, ದೊಡ್ಡ ಪ್ರಮಾಣದಲ್ಲಿಯೇ ಸಮಾಜಕ್ಕೆ ಡ್ರಗ್ಸ್ ಪೂರೈಕೆಯಾಗುತ್ತಿರುವುದು ಕಳವಳಕಾರಿ. ಡ್ರಗ್ಸ್ ಜಾಲದಿಂದ ಸಮಾಜವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು. 

ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಕರಾಳಹಸ್ತ ಚಾಚದಂತೆ ಎಚ್ಚರ ವಹಿಸಬೇಕು. ಸಿನೆಮಾ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮಾದಕ ವಸ್ತುಗಳ ಜಾಲದೊಂದಿಗೆ ನಂಟು ಹೊಂದಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು