ಭಾನುವಾರ, ಆಗಸ್ಟ್ 1, 2021
26 °C

ಕೊರೊನಾ ತಂದ ಆರ್ಥಿಕ ಸಂಕಷ್ಟ: ಯುವಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕೊರೊನಾ ನಿರ್ಬಂಧಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಯುವಕ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗೋಪಾಳದ ಎಲ್ಐಸಿ ವಸತಿ ಗೃಹದ ಸಮೀಪದ ನಿವಾಸಿ ಅಮಿತ್ ಕುಮಾರ್ (29) ಆತ್ಮಹತ್ಯೆ ಮಾಡಿಕೊಂಡವರು. 

ಖಾಸಗಿ ಟ್ರಾವೆಲ್ ಏಜೆನ್ಸಿಯ ಪಾಲುದಾರರಾಗಿದ್ದ ಅವರು ಮಾರ್ಚ್‌ನಿಂದ ತೀವ್ರ ಆರ್ಥಿಕ ನಷ್ಟ ಅನುಭವಿಸಿದ್ದರು. ವ್ಯವಹಾರ ಸ್ಥಗಿತವಾಗಿದ್ದ ಕಾರಣ ಆರ್ಥಿಕ ಮುಗ್ಗಟ್ಟಿನಿಂದ ಜೀವನ ಸಾಗಿಸುವುದೇ ಕಷ್ಟವಾಗಿತ್ತು.

‘ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ತಮ್ಮ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು