ಶಿವಮೊಗ್ಗ: ಯಾವುದೇ ಸಮುದಾಯ ವಿದ್ಯೆಯಿಂದ ಮಾತ್ರ ಏಳಿಗೆ ಹೊಂದಲು ಸಾಧ್ಯ. ಹಾಸ್ಟೆಲ್ ನಿರ್ಮಾಣ ಮಾಡುವುದು ಧರ್ಮದ ಕೆಲಸ ಇದರಿಂದ ಮಕ್ಕಳ ಭವಿಷ್ಯ ಕಟ್ಟುವ ಕೆಲಸ ಆಗುತ್ತದೆ ಎಂದು ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಎಸ್.ರಾಮಪ್ಪ ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘವು ಬಾಪೂಜಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ಈಡಿಗ ಸಮುದಾಯದ ಬಾಲಕರ ವಿದ್ಯಾರ್ಥಿನಿಲಯದ ಹೆಚ್ಚುವರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈಡಿಗ ಸಮುದಾಯ ಮಲೆನಾಡಿನ ಹಳ್ಳಿಗಾಡಿನಲ್ಲಿ ಹೆಚ್ಚಾಗಿ ವಾಸಿಸುತ್ತಿದೆ. ಬಹುಸಂಖ್ಯಾತರಾದ ಈ ಸಮುದಾಯದ ಮಕ್ಕಳಿಗೆ ಎಲ್ಲರಿಗೂ ಸರ್ಕಾರಿ ಹಾಸ್ಟೆಲ್ ಸಿಗುವುದು ಕಷ್ಟ. ಈಗ ಸರ್ಕಾರ ಹೆಚ್ಚಿನ ವಿದ್ಯಾರ್ಥಿನಿಲಯಗಳ ಸಂಖ್ಯೆ ಹೆಚ್ಚಿಸಿದ್ದರೂ, ಮಕ್ಕಳ ಸಂಖ್ಯೆ ಇನ್ನೂ ಹೆಚ್ಚಾಗಿದೆ. ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿರುವ ಈಡಿಗ ಹಾಸ್ಟೆಲ್ನಲ್ಲಿದ್ದುಕೊಂಡು ಹೆಚ್ಚಿನ ಶಿಕ್ಷಣ ಪಡೆಯುವ ಅವಕಾಶ ಇದೆ ಎಂದು ಹೇಳಿದರು.

ಈಡಿಗರ ಸಂಘದಿಂದ ಮಾತ್ರ ಎಲ್ಲವೂ ಸಾಧ್ಯವಾಗದು. ಸಮಾಜದ ಸ್ಥಿತಿವಂತರು ಹಾಸ್ಟೆಲ್ ನಿರ್ಮಾಣಕ್ಕೆ ಸಹಕಾರ ನೀಡಬೇಕು. ಎಲ್ಲರೂ ಕೂಡಿ ಹೆಚ್ಚುವರಿ ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡಿ ನಮ್ಮ ಮಕ್ಕಳಿಗೆ ಅನುಕೂಲ ಮಾಡಿಕೊಡೋಣ ಎಂದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾತನಾಡಿ, ‘ಯಾವುದೇ ಸಮುದಾಯ ಪಡೆದಿರುವ ಶಿಕ್ಷಣದ ಮಟ್ಟದ ಮೇಲೆ ಅದರ ಅಭಿವೃದ್ಧಿಯ ಸೂಚ್ಯಂಕ ನಿರ್ಧಾರವಾಗುತ್ತದೆ. ಜಿಲ್ಲೆಯ ಪ್ರಭಾವಿ ಸಮುದಾಯವಾದ ಈಡಿಗರೊಂದಿಗೆ ನನಗೆ ಹೆಚ್ಚಿನ ಸಂಪರ್ಕ ಇದೆ. ಈ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು. ಹೊಸನಗರ ಹಾಗೂ ತೀರ್ಥಹಳ್ಳಿಯ ಸಂಘದ ಸಮುದಾಯ ಭವನಕ್ಕೆ ನೆರವು ನೀಡಿದ್ದೇನೆ. ಹಾಸ್ಟೆಲ್ ಕಟ್ಟಡಕ್ಕೂ ನೆರವು ನೀಡುವೆ’ ಎಂದರು.

ಸಹಕಾರಿ ಕ್ಷೇತ್ರದಲ್ಲಿರುವ ನಾನು ಜಿಲ್ಲೆಯ ಸುಮಾರು 100 ಮಂದಿಗೆ ಬ್ಯಾಂಕಿನಲ್ಲಿ ನೌಕರಿ ಕೊಡಿಸಿದ್ದೇನೆ. ಅಪೆಕ್ಸ್ ಬ್ಯಾಂಕ್ನಲ್ಲಿಯೂ ದೀವರ ಯುವಜನರಿಗೆ ನೌಕರಿ ನೀಡಿದ್ದೇನೆ. ಈ ಸಮುದಾಯದೊಂದಿಗೆ ನನಗೆ ಒಂದು ಭಾವನಾತ್ಮಕ ಸಂಬಂಧ ಇದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಸಮುದಾಯದ ಎಲ್ಲಾ ಜನಪ್ರತಿನಿಧಿಗಳು ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸ್ಥಳೀಯ ಶಾಸಕರು, ಸಂಸದರು ಕೂಡಾ ನೆರವು ನೀಡುವ ಮಾತು ನೀಡಿದ್ದಾರೆ ಎಂದರು. ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೂ ಸಮಾಜದವರು ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಸ್ವಾಗತಿಸಿದರು. ಕುಮಾರಿ ಈಶಾನ್ವಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಜಿ.ಡಿ.ಮಂಜುನಾಥ ನಿರೂಪಿಸಿದರು. ವೇದಿಕೆಯಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಖಜಾಂಚಿ ಕಾಗೋಡು ರಾಮಪ್ಪ ಮತ್ತಿತರರಿದ್ದರು. ಕಾರ್ಯಕ್ರಮಕ್ಕೆ ಮಹಿಳಾ ಈಡಿಗ ಸಂಘ, ತಾಲೂಕು ಈಡಿಗ ಸಂಘಗಳ ಅಧ್ಯಕ್ಷರು, ಪ್ರತಿನಿಧಿಗಳು ಆಗಮಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.