ಮಂಗಳವಾರ, ಫೆಬ್ರವರಿ 7, 2023
27 °C
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ

ಈಸೂರಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಈಸೂರು (ಶಿಕಾರಿಪುರ): ‘ಈಸೂರಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ತಾಲ್ಲೂಕಿನ ಈಸೂರು ಗ್ರಾಮದಲ್ಲಿ ಸೋಮವಾರ ಬನಶಂಕರಿ ಸಮುದಾಯ ಭವನ ಉದ್ಘಾಟಿಸಿ ಅವರು ಮಾತನಾಡಿದರು.

‘ದೇವಾಂಗ ಸಮುದಾಯಕ್ಕೆ ತನ್ನದೇ ಆದ ಇತಿಹಾಸ ಇದೆ. ದೇವಾಂಗ ಮಹರ್ಷಿ ಪಾತ್ರ ಮಹತ್ವದ್ದಾಗಿದೆ. ಸಮಾಜದ ಅಭಿವೃದ್ಧಿಗಾಗಿ ಹಲವು ಕಾರ್ಯಗಳನ್ನು ಕೈಗೊಳ್ಳಲಾಗಿದೆ’ ಎಂದರು.

‘ನನಗೆ ಯಾವ ರೀತಿ ಆಶೀರ್ವಾದ ಮಾಡಿದ್ದೀರೋ ಅದೇ ರೀತಿ ಬಿ.ವೈ. ವಿಜಯೇಂದ್ರ ಅವರಿಗೂ ಆಶೀರ್ವಾದ ಮಾಡಬೇಕು. ದೊಡ್ಡ ಅಂತರದಲ್ಲಿ ವಿಜಯೇಂದ್ರ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

‘ರಾಜ್ಯದಲ್ಲಿ ಎಲ್ಲ ಸಮುದಾಯ ಭವನ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅನುದಾನ ನೀಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ ಅವರಿಂದ ಕೃಷಿ ಸಮ್ಮಾನ್ ಯೋಜನೆ ಅಡಿ ರೈತರಿಗೆ ₹ 10,000  ದೊರೆಯುತ್ತಿದೆ. ರೈತರು ಖರೀದಿಸುವ ಯೂರಿಯಾ ಗೊಬ್ಬರಕ್ಕೆ ಸರ್ಕಾರ ಸಹಾಯಧನ ನೀಡುತ್ತಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. 

‘ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯಡಿಯೂರಪ್ಪ ಆದ್ಯತೆ ನೀಡಿದ್ದಾರೆ. ಅದೇ ರೀತಿ ಅಭಿವೃದ್ಧಿ ಕಾರ್ಯ ಮುನ್ನಡೆಸಲು ನನಗೆ ಆಶೀರ್ವದಿಸಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮಿ ನಾರಾಯಣ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಮುಖಂಡರಾದ ಕೊಳಗಿ ರೇವಣಪ್ಪ, ಗಿರಿಯಪ್ಪ, ಭದ್ರಾಪುರ ಹಾಲಪ್ಪ, ತೊಗರ್ಸಿ ಸಣ್ಣಹನುಮಂತಪ್ಪ, ವೀರೇಂದ್ರ ಪಾಟೀಲ್, ಕೆ.ಜಿ.ಶಿವಪ್ಪಯ್ಯ, ಕೆ.ಜಿ. ವಸಂತಗೌಡ, ಅರುಂಧತಿ ರಾಜೇಶ್, ದೇವಸ್ಥಾನ ಸಮಿತಿ ಅಧ್ಯಕ್ಷ ಚಂದಪ್ಪ ಹಾಗೂ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು