ಶಿವಮೊಗ್ಗ: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ರಜಾ ದಿನ ಹೊರತುಪಡಿಸಿ, ವಾರದ 6 ದಿನವೂ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಲ್ಯಾಪ್ ಟಾಪ್ ವಿತರಿಸಿ ಹಾಗೂ ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯಸ್ಥರನ್ನು ಅಭಿನಂದಿಸಿ ಅವರು ಮಾತನಾಡಿದರು.

‘ಈ ಮೊದಲು ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ವಾರಕ್ಕೊಮ್ಮೆ ಮೊಟ್ಟೆ ವಿತರಣೆ ಮಾಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು 10ನೇ ತರಗತಿಯವರೆಗೆ ವಿಸ್ತರಿಸಿದೆ. ವಾರದಲ್ಲಿ ಒಂದು ದಿನದ ಬದಲು ಎರಡು ದಿನಕ್ಕೆ ಹೆಚ್ಚಿಸಲಾಗಿತ್ತು. ಇನ್ನು ವಾರವಿಡೀ ವಿತರಿಸಲಾಗುವುದು’ ಎಂದರು.

ರಾಜ್ಯದಲ್ಲಿ 50,000 ಶಿಕ್ಷಕರ ಕೊರತೆ ಇದೆ. 45,000 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಈ ವರ್ಷ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಅನುದಾನಿತ ಶಾಲೆಗಳ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ಈ ವರ್ಷ ರಾಜ್ಯದಲ್ಲಿ 1,600 ಶಾಲೆಗಳ ಕೊಠಡಿಗಳ ದುರಸ್ತಿ ಗುರಿ ಹೊಂದಲಾಗಿದೆ. ಅಗತ್ಯವಿರುವ ಕಡೆ ಹೊಸ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಮಂಜೂರಾತಿ ನೀಡಲಾಗುವುದು. ಹೊಸದಾಗಿ 500 ಕೆಪಿಎಸ್ ಶಾಲೆಗಳನ್ನು ತೆರೆಯಲು ಮೊದಲು ಉದ್ದೇಶಿಸಲಾಗಿತ್ತು. ಈಗ ಅದನ್ನು 1,000ಕ್ಕೆ ಏರಿಸಲಾಗುವುದು. ಕೆಪಿಎಸ್ ಶಾಲೆಯಲ್ಲಿ 10 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುವ ಗುರಿ ಹೊಂದಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್, ಸಿದ್ದಬಸಪ್ಪ, ಧರ್ಮಪ್ಪ, ರಾಘವೇಂದ್ರ, ಹರಿಪ್ರಸಾದ್ ಇದ್ದರು.

ಹೇರ್ಸ್ಟೈಲ್: ವೈಯಕ್ತಿಕ ಟೀಕೆ ಬೇಡ

‘ನನ್ನ ಹೇರ್ ಸ್ಟೈಲ್ ವಿಚಾರದಲ್ಲಿ ಕೆಲವರು ವೈಯಕ್ತಿಕವಾಗಿ ಟೀಕೆ ಮಾಡುತ್ತಿದ್ದಾರೆ. ಅದು ಸರಿಯಲ್ಲ. ನನ್ನನ್ನು ನೋಡಿದರೆ ವಾಕರಿಗೆ ಬರುತ್ತದೆ ಎಂದು ಸಾಹಿತಿಯೊಬ್ಬರು ಹೇಳಿದ್ದಾರೆ. ಹೀಗೆ ವೈಯಕ್ತಿಕವಾಗಿ ಟೀಕೆ ಮಾಡುವ ಬದಲು ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ರಚನಾತ್ಮಕ ಬದಲಾವಣೆ ಬಗ್ಗೆ ಸಲಹೆ ಕೊಡಲಿ ಗೌರವಯುತವಾಗಿ ಸ್ವೀಕರಿಸುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.