ಸೋಮವಾರ, ಜನವರಿ 24, 2022
21 °C

ವಿಧಾನಪರಿಷತ್‌ ಚುನಾವಣೆ: ಕಾಂಗ್ರೆಸ್‌ನತ್ತ ಜೆಡಿಎಸ್‌ ಒಲವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ವಿಧಾನಪರಿಷತ್‌ ಚುನಾವಣೆಗೆ ಭದ್ರಾವತಿ ಹೊರತುಪಡಿಸಿ ಬೇರೆ ತಾಲ್ಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್‌ ತಿಳಿಸಿದರು.

ಇಲ್ಲಿಯ ಜೆಡಿಎಸ್‌ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ವಿಧಾನಪರಿಷತ್‌ ಚುನಾವಣೆಗೆ ಈಗಾಲೇ ಜೆಡಿಎಸ್‌ ಬೆಂಬಲಿತ ಸದಸ್ಯರು ಕಾಂಗ್ರೆಸ್‌ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಇನ್ನೂ ಎರಡು ತಾಲ್ಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಪಕ್ಷದ ಮುಖಂಡರಾದ ಮಹೇಶ್, ಕಾಂತರಾಜ್, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು