ಬುಧವಾರ, ಅಕ್ಟೋಬರ್ 21, 2020
21 °C

ವಿದ್ಯುತ್ ಶಾಕ್: ಲೈನ್‌ಮನ್‌‌ ಸಾವು

ಪ್ರಜಾವಾಣಿ ವಾರ್ತೆ  Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಈಚಿಗೆ ಕುವೆಂಪು ರಸ್ತೆಯಲ್ಲಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದು ತೀವ್ರ ಗಾಯಗೊಂಡಿದ್ದ ಲೈನ್‌ಮನ್ ಉಮಾ ಶಂಕರ್ (42) ಬುಧವಾರ ಮೃತಪಟ್ಟಿದ್ದಾರೆ.

ಅ.8ರಂದು ಕುವೆಂಪು ರಸ್ತೆಯಲ್ಲಿ ಮೆಗ್ಗಾನ್ ಆಸ್ಪತ್ರೆಯ ವಿದ್ಯುತ್ ಲೈನ್‍ನಲ್ಲಿ ದುರಸ್ತಿ ಕೆಲಸ ಮಾಡುತ್ತಿದ್ದ ವೇಳೆ ಉಮಾಶಂಕರ್‌ಗೆ ವಿದ್ಯುತ್ ಶಾಕ್ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು