ಭಾನುವಾರ, ಸೆಪ್ಟೆಂಬರ್ 26, 2021
21 °C
ತುರ್ತು ಪರಿಸ್ಥಿತಿ: ದೇಶ ಕಂಡ ಕರಾಳ ದಿನ

‘ತುರ್ತು ಪರಿಸ್ಥಿತಿ: ಒಂದು ನೆನಪು’ ಕಾರ್ಯಕ್ರಮದಲ್ಲಿ ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ‘ಮಾಜಿ ಪ್ರಧಾನಿ ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿ ದೇಶ ಕಂಡ ಕರಾಳ ದಿನವಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಬಿಜೆಪಿ ಆಯೋಜಿಸಿದ್ದ 1975 ತುರ್ತು ಪರಿಸ್ಥಿತಿ ಕರಾಳ ದಿನಗಳು ಒಂದು ನೆನಪು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದಿನ ಯುವಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಅಗತ್ಯತೆ ಇದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ 1975ರಲ್ಲಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಹಲವು ನಾಯಕರನ್ನು ಜೈಲಿಗೆ ಹಾಕಿದರು. ಅಧಿಕಾರ ದಾಹಕ್ಕಾಗಿ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದರು. ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿದ ಹಿರಿಯ ನಾಯಕರ ಹೋರಾಟವನ್ನು ನಾವು ಗೌರವಿಸಬೇಕು. ನಾಯಕರ ಹೋರಾಟ ಇಂದಿನ ಯುವ ಪೀಳಿಗೆಗೆ ಆದರ್ಶವಾಗಬೇಕು’ ಎಂದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಕೆ.ಎಸ್.ಗುರುಮೂರ್ತಿ, ‘ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಟೀಕೆ ಮಾಡುತ್ತಾರೆ. ಆದರೆ ಅವರು ಪ್ರಜಾಪ್ರಭುತ್ವದ ಆಶಯದಂತೆ ಆಡಳಿತ ನಡೆಸುತ್ತಿದ್ದಾರೆ. ಅಧಿಕಾರ ಉಳಿಸಿಕೊಳ್ಳಲು 1975ರಲ್ಲಿ ಕಾಂಗ್ರೆಸ್ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದರು. ಈ ತುರ್ತು ಪರಿಸ್ಥಿತಿ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸೇರಿ ಹಲವು ನಾಯಕರು ಹೋರಾಟ ಮಾಡಿ ಜೈಲು ಸೇರಿದರು. ಈ ಹೋರಾಟವನ್ನು ನಾವು ಸ್ಮರಿಸಬೇಕು’ ಎಂದರು.

ಇದೇ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿ ಜೈಲು ಸೇರಿದ್ದಧ ಪದ್ಮನಾಭ ಭಟ್, ಲೀಲಾವತಿ ಹಾಗೂ ಬಿ.ಪಿ. ನಾರಾಯಣರಾವ್ ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ‘1975ರಲ್ಲಿ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ಕೆಲಸ ಆಗಿತ್ತು. ಮಾಜಿ ಪ್ರಧಾನಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರುವ ಮೂಲಕ ದೇಶದಲ್ಲಿ ಕರಾಳ ದಿನವನ್ನು ನಿರ್ಮಿಸಿದರು. ತುರ್ತು ಪರಿಸ್ಥಿತಿ ವಿರುದ್ಧ ಹಲವು ನಾಯಕರು ಹೋರಾಟ ನಡೆಸಿದರು. ಈ ಹೋರಾಟದಲ್ಲಿ ನಾನು ಭಾಗವಹಿಸಿದ್ದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಸ್ಮರಿಸಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಡಿ.ಟಿ.ಮೇಘರಾಜ್, ಉಪಾಧ್ಯಕ್ಷ ಭದ್ರಾಪುರ ಹಾಲಪ್ಪ, ತಾಲ್ಲೂಕು ಅಧ್ಯಕ್ಷ ವೀರೇಂದ್ರ ಪಾಟೀಲ್, ಸಾಗರ ಅಧ್ಯಕ್ಷ ಲೋಕನಾಥ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಬಿಜೆಪಿ ನಗರ ಘಟಕ ಅಧ್ಯಕ್ಷ ಟಿ.ಎಸ್.ಮೋಹನ್, ಯುವ ಮೋರ್ಚಾ ಅಧ್ಯಕ್ಷ ಬೆಣ್ಣೆ ಪ್ರವೀಣ್, ರಾಜ್ಯ ಎಪಿಎಂಸಿ ಉಪಾಧ್ಯಕ್ಷ ಚುರ್ಚಿಗುಂಡಿ ರುದ್ರಮುನಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು