ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊರಬದ ಅಭಿವೃದ್ಧಿಗೆ ಒತ್ತು: ಕುಮಾರ್ ಬಂಗಾರಪ್ಪ

Last Updated 23 ಜನವರಿ 2023, 5:20 IST
ಅಕ್ಷರ ಗಾತ್ರ

ಸೊರಬ: ಭವಿಷ್ಯದ ದೃಷ್ಟಿಯಿಂದ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದ್ದು, ಸಮಗ್ರ ನೀರಾವರಿ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.

ಪಟ್ಟಣದ 3ನೇ ವಾರ್ಡ್‌ನ ಚಾಮರಾಜನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

4 ವರ್ಷಗಳ ಅವಧಿಯಲ್ಲಿ ₹ 1,000 ಕೋಟಿಗೂ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿವೆ. ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಕೃಷಿ ಜಮೀನುಗಳಿಗೆ ನೀರಾವರಿ ಸೌಲಭ್ಯಗಳನ್ನು ಶಾಶ್ವತವಾಗಿ ಕಲ್ಪಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದರು.

ಕಾರ್ಯಕರ್ತರು ಹಾಗೂ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.

‘ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿತವಾಗಿದೆ. ತಾಲ್ಲೂಕಿನಲ್ಲಿ ಅಭಿವೃದ್ಧಿ ಪರ್ವವನ್ನು ಆರಂಭಿಸಿರುವ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಮತ್ತೊಮ್ಮೆ ಬೆಂಬಲಿಸಲು ಜನರು ಉತ್ಸಾಹ ತೋರುತ್ತಿದ್ದಾರೆ’ ಎಂದು ಪುರಸಭೆ ಮಾಜಿ ಅಧ್ಯಕ್ಷ ಎಂ.ಡಿ. ಉಮೇಶ್ ಹೇಳಿದರು.

ಪುರಸಭೆ ಉಪಾಧ್ಯಕ್ಷ ಮಧುರಾಯ್ ಶೇಟ್, ಸದಸ್ಯ ನಟರಾಜ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಶಿವಕುಮಾರ್ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ್ ಶೇಟ್, ಬೂತ್ ಅಧ್ಯಕ್ಷ ಬಸವರಾಜ ಶೇಟ್, ಶಿವು, ಭವನಮ್ಮ, ಬಾಬಣ್ಣ, ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT