ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೆಡಿಎಸ್ ಸಂಘಟನೆ ಬಲಪಡಿಸಲು ಒತ್ತು’

Last Updated 7 ಆಗಸ್ಟ್ 2022, 7:07 IST
ಅಕ್ಷರ ಗಾತ್ರ

ಹೊಸನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ತಳಹಂತದಿಂದ ಸಂಘಟಿಸುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮುಖಂಡ ಯಡೂರು ರಾಜಾರಾಂ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪಕ್ಷದ ನೂತನ ತಾಲ್ಲೂಕು ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ತೀರ್ಥಹಳ್ಳಿ ಕ್ಷೇತ್ರದಿಂದ ಸರ್ಧಿಸುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ. ಈ ಕಾರಣ ಪಕ್ಷ ಸಂಘಟನೆ ಬಲಪಡಿಸಲಾಗುವುದು.ಸಮಾಜವಾದಿ ಹಿನ್ನೆಲೆ ಹೊಂದಿರುವ ತೀರ್ಥಹಳ್ಳಿಯಲ್ಲಿ ಚುನಾವಣೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಣದ ಪ್ರಭಾವ ಕಂಡುಬಂದಿರುವುದು ದುರಂತ. ನನಗೆ ಕ್ಷೇತ್ರವನ್ನು ಪ್ರತಿನಿಧಿಸುವ ಅವಕಾಶ ದೊರೆತಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತೇನೆ’ ಎಂದರು.

‘ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಜಿಲ್ಲೆಯ ನಾಯಕರ ಮುಂದಾಳತ್ವದಲ್ಲಿ ಪಕ್ಷವನ್ನು ಬಲಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಇದರ ಭಾಗವಾಗಿ ಆಗಸ್ಟ್‌ 20ರಂದು ಇಲ್ಲಿನ ಗಾಯತ್ರಿ ಮಂದಿರದಲ್ಲಿ ತಾಲ್ಲೂಕು ಮಟ್ಟದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದುಪಕ್ಷದ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಹೇಳಿದರು.

ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಂ.ವಿ. ಜಯರಾಂ ಅವರು ನೂತನ ಅಧ್ಯಕ್ಷ ವರ್ತೇಶ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸುಮತಿ ರಾಮಪೂಜಾರ್, ವರದರಾಜ್, ಎಂ.ಪಿ. ರಮಾನಂದ, ಆರ್.ಎಸ್. ಮಂಜುನಾಥ್, ಈರಣ್ಣ, ವಾಸಪ್ಪಗೌಡ, ಷಣ್ಮುಖ, ರಘು ಆಚಾರ್, ಭಾಗ್ಯ ಗೋಪಾಲ್, ಮಾಸ್ತಿಕಟ್ಟೆ ವಾಸಪ್ಪ, ವರದರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT