ಆನವಟ್ಟಿ: ಸಮೀಪದ ಎಣ್ಣೆಕೊಪ್ಪ- ಕಮನವಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಬಸವೇಶ್ವರ ದೇವಸ್ಥಾನ ಏ. 20ರಂದು ಉದ್ಘಾಟನೆಯಾಗಲಿದೆ.

20ರಿಂದ 22ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಭಕ್ತರಿಗೆ ಮೂರು ದಿನ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಈಶ್ವರ, ಬಸವೇಶ್ವರ, ಸಿದ್ದರಾಮೇಶ್ವರ, ವಿಘ್ನೇಶ್ವರ, ವೀರಭದ್ರೇಶ್ವರ ದೇವರ ಮೂರ್ತಿಗಳ ಜೊತೆಗೆ ಶರಣರ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

22ರಂದು ಬಸವೇಶ್ವರ ದೇವರ ನೂತನ ರಥೋತ್ಸವ ಹಾಗೂ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ತೊಗರ್ಸಿ ದೊಡ್ಡ ಮಳೆಮಠದ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ, ಯಲವಟ್ಟಿ ಸಿದ್ಧಾಶ್ರಮದ ಯೋಗಾನಂದ ಸ್ವಾಮೀಜಿ, ಜಡೆ ಮಠದ ಮಹಾಂತ ಸ್ವಾಮೀಜಿ, ಹಿರೇಮಾಗಡಿ ಮಠದ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ಮೂಡಿ ಮಠದ ಸದಾಶಿವ ಸ್ವಾಮೀಜಿ, ಗುಡ್ಡದ ಮಲ್ಲಾಪುರ ದಾಸೋಹಮಠದ ಮೂಕಪ್ಪ ಶಿವಾಚಾರ್ಯ ಸ್ವಾಮೀಜಿ, ಶಾಡಗುಪ್ಪಿ ಮಠದ ಶನೇಶ್ವರ ಮೂಕಪ್ಪ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗಿಯಾಗಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಅರುಣಕುಮಾರ ಪಾಲ್ಗೊಳ್ಳುವರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವಂತೆ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಎಸ್. ರುದ್ರಪ್ಪ ಕಡ್ಲೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-472031969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.