ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ನ್ಯಾಯಾಧೀಶ ಯಶವಂತಕುಮಾರ್
Published 8 ಜೂನ್ 2024, 15:38 IST
Last Updated 8 ಜೂನ್ 2024, 15:38 IST
ಅಕ್ಷರ ಗಾತ್ರ

ಶಿಕಾರಿಪುರ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಜೆಎಂಎಫ್ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಧೀಶ ಆರ್. ಯಶವಂತಕುಮಾರ್ ತಿಳಿಸಿದರು.

ಪಟ್ಟಣದ ಜೆಎಂಎಫ್ ನ್ಯಾಯಾಲಯದ ಅವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಜನೆ ಇಲಾಖೆ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ಈಚೆಗೆ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮರ ಗಿಡಗಳಿಂದ ಉತ್ತಮ ಗಾಳಿ ದೊರೆಯಲಿದೆ. ನಮ್ಮ ಉತ್ತಮ ಆರೋಗ್ಯಕ್ಕೆ ಪರಿಸರ ಸಹಕಾರಿಯಾಗಲಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರ ನಾಶಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಅರಣ್ಯ ನಾಶದಿಂದ ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು, ಮಳೆ ಪ್ರಮಾಣ ಕಡಿಮೆಯಾಗಿದೆ. ನಾವು ಪ್ರಕೃತಿಯನ್ನು ಉಳಿಸಿ ಬೆಳೆಸಲು ಮುಂದಾಗಬೇಕು. ಗಿಡ ಮರಗಳನ್ನು ನೆಟ್ಟು, ಪೋಷಣೆ ಮಾಡಬೇಕು’ ಎಂದು ಸಲಹೆ ನೀಡಿದರು.

ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. ಆನಂದಪ್ಪ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅವಿನಾಶ್ ಗಾಳಿ, ವಕೀಲರ ಸಂಘದ ಅಧ್ಯಕ್ಷ ಸಂತೋಷ್‌ ಕುಮಾರ್, ಕಾರ್ಯದರ್ಶಿ ಎಚ್.ಪಿ. ಪ್ರಕಾಶ್, ಅರಣ್ಯ ಇಲಾಖೆ ಎಸಿಎಫ್ ಸುರೇಶ್‌, ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಹಿರೇಮಠ, ಉಪ ವಲಯ ಅರಣ್ಯಾಧಿಕಾರಿ ಮತ್ತು ವಕೀಲರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT