ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಕಾರ್ಯಕ್ರಮದಿಂದ ಈಶ್ವರಪ್ಪ ದೂರ: ವೀರಶೈವ-ಲಿಂಗಾಯತ ಮಠಗಳಿಗೆ ಭೇಟಿ

Published 18 ಮಾರ್ಚ್ 2024, 8:30 IST
Last Updated 18 ಮಾರ್ಚ್ 2024, 8:30 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಿಂದ ದೂರ ಉಳಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸೋಮವಾರ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿಗೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಬಿಳಕಿ, ಗೋಣಿಬೀಡು, ತೊಗರ್ಸಿ, ಹಿರೇಮಾಗಡಿ, ಜಡೇ-ಮೂಡಿ, ಶಾಂತಪುರ, ಹಾರ್ನಹಳ್ಳಿ ಚೌಕಿಮಠ, ಮೂಲೆಗದ್ದೆ, ಹುಂಚಾ ಜೈನಮಠ, ಶಿಕಾರಿಪುರದ ಸಾಲೂರು ಸೇರಿದಂತೆ 10ಕ್ಕೂ ಹೆಚ್ಚು ಮಠಗಳ ಭೇಟಿಗೆ ತೆರಳಿದ್ದು, ವೀರಶೈವ-ಲಿಂಗಾಯತ ಹಾಗೂ ಜೈನ ಸಮುದಾಯದ ಶ್ರೀಗಳ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ.

ಪ್ರಧಾನಮಂತ್ರಿ ಕಾರ್ಯಕ್ರಮದಿಂದ ಈಶ್ವರಪ್ಪ ದೂರ ಉಳಿದರೂ ಮುಖ್ಯ ವೇದಿಕೆಯಲ್ಲಿ ಯಡಿಯೂರಪ್ಪ ಜೊತೆ ಈಶ್ವರಪ್ಪ ಅವರ ಭಾವಚಿತ್ರ ಕೂಡ ಪ್ರದರ್ಶಿಸಲಾಯಿತು.

ಡಾ.ಸಿ.ಎನ್.ಮಂಜುನಾಥ್ ಉಪಸ್ಥಿತಿ:

ಮುಖ್ಯವೇದಿಕೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ಸಂಸದ ಬಿ.ವೈ.ರಾಘವೇಂದ್ರ, ದಾವಣಗೆರೆ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ, ಸಂಸದ ಜಿ.ಎಂ.ಸಿದ್ದೇಶ, ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ, ಆಸೀನರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT