ಶಿವಮೊಗ್ಗ: ಬೆಂಗಳೂರಿನ ಹೊರಗೆ ಕೈಗಾರಿಕಾ ವಲಯಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ. ಅಂತಹ ಉದ್ಯಮಿಗಳಿಗೆ ನೆರವು, ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ರಾಜ್ಯದ ಬೇರೆಬೇರೆ ಭಾಗಗಳಲ್ಲಿ ದೊಡ್ಡದೊಡ್ಡ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕಬೇಕು. ಕೃಷಿ ಮತ್ತು ಕೈಗಾರಿಕಾ ವಲಯ ಸಮಾನಾಂತರವಾಗಿ ಸಾಗಿದರೆ ನಿರುದ್ಯೋಗ ಸಮಸ್ಯೆ ನಿವಾರಣೆ ಜತೆಗೆ, ರಾಜ್ಯದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಟ್ರಂಪ್ ಭೇಟಿಗೆ ಗೈರು

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ತಮಗೂ ಆಹ್ವಾನ ಬಂದಿದೆ. ಕೆಲಸ ಕಾರ್ಯಗಳ ಒತ್ತಡದಿಂದ ಅಲ್ಲಿಗೆ ಹೋಗುತ್ತಿಲ್ಲ. ವಿಶ್ವದ ಬಲಿಷ್ಠ ರಾಷ್ಟ್ರ ಅಮೆರಿಕ. ಮೋದಿ ಅವರ ವೈಯಕ್ತಿಕ ಸ್ನೇಹದ ಕಾರಣಕ್ಕೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಬರುವಿಕೆಗೆ ಸ್ವಾಗತ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.