ಸಾಗರ: ಯಾವುದೇ ಪರೀಕ್ಷೆಯಲ್ಲಿ ಯಶಸ್ಸಿನ ಸವಿ ಸವಿಯಬೇಕಾದರೆ ಸಾಕಷ್ಟು ಪೂರ್ವ ತಯಾರಿ ಇರಲೇಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಹೇಳಿದರು.

ತಾಲ್ಲೂಕಿನ ಗಿಣಿವಾರ ಗ್ರಾಮದ ಕೊಡಚಾದ್ರಿ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಲಿಕಾ ಬಲವರ್ಧನ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಕಲಿಕೆ ಎಂಬುದು ನಿರಂತರ ಪ್ರಕ್ರಿಯೆಯಾಗಿದೆ. ಕಲಿತು ಮುಗಿಯಿತು ಎನ್ನುವ ಮನೋಭಾವ ವಿದ್ಯಾರ್ಥಿಗಳಲ್ಲಿ ಬರದಂತೆ ನೋಡಿಕೊಳ್ಳುವ ಜವಾಬ್ಧಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿದೆ. ಅಂತಹ ಮಾನಸಿಕತೆಯನ್ನು ಅವರಲ್ಲಿ ಬೆಳೆಸಬೇಕು ಎಂದು ಕಿವಿಮಾತು ಹೇಳಿದರು.

ಒತ್ತಡದ ವಾತಾವರಣವಿಲ್ಲದೆ ವಿದ್ಯಾರ್ಥಿಗಳು ಸ್ವಯಂಸ್ಫೂರ್ತಿಯಿಂದ ಕಲಿಕೆಗೆ ಮುಂದಾಗುವಂತೆ ಪ್ರೇರೇಪಿಸಬೇಕಿದೆ. ಆ ಮೂಲಕ ಅವರ ಮಾನಸಿಕ ಸ್ಥೈರ್ಯವನ್ನು ಗಟ್ಟಿಗೊಳಿಸಬೇಕು ಎಂದು ಮುಖ್ಯ ಶಿಕ್ಷಕ ನಾಗರಾಜ್ ಹೆಗಡೆ ಹೇಳಿದರು.

ಪ್ರಮುಖರಾದ ಪ್ರಕಾಶ್ ಕೆ.ಆರ್. ರಮೇಶ್, ವಿ.ಟಿ.ಸ್ವಾಮಿ, ಕುಮಾರಸ್ವಾಮಿ, ನಂದಕುಮಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.