ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ.ಗು. ಹಳಕಟ್ಟಿ ಕಾರ್ಯ ಸ್ಮರಣೀಯ

ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ
Last Updated 3 ಜುಲೈ 2022, 2:08 IST
ಅಕ್ಷರ ಗಾತ್ರ

ಶಿವಮೊಗ್ಗ: ಸಾಹಿತ್ಯ ಸಂಗ್ರಹಕ್ಕೆ ಪೂರಕ ಸೌಲಭ್ಯ ಮತ್ತು ಅನುಕೂಲ ಇಲ್ಲದ ಕಾಲದಲ್ಲಿ ಸಮಗ್ರ ವಚನ ಸಾಹಿತ್ಯ ಸಂರಕ್ಷಿಸುವ ಕೆಲಸ ಮಾಡಿದ ಫ.ಗು. ಹಳಕಟ್ಟಿ ಪ್ರಾತಃ ಸ್ಮರಣೀಯರು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಬಣ್ಣಿಸಿದರು.

ಜಿಲ್ಲಾಡಳಿತದಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ (ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ) ಉದ್ಘಾಟಿಸಿ ಮಾತನಾಡಿದರು.

ಈ ಹಿಂದೆ ಸಾಹಿತ್ಯ ಸಂಗ್ರಹಣೆ ಮತ್ತು ಮುದ್ರಣ ಬಹಳ ಕಷ್ಟವಾಗಿತ್ತು. ಕಾಗದ, ಲೇಖನ ಸಾಮಗ್ರಿ, ಮುದ್ರಣ ಸೇರಿ ಇತರೆ ಸೌಲಭ್ಯಗಳು ಇರಲಿಲ್ಲ. ಅಂತಹ ಕಷ್ಟಕರ ಪರಿಸ್ಥಿತಿಯಲ್ಲಿಯೂ ಸಹ ಫ.ಗು.ಹಳಕಟ್ಟಿ ವಚನ ಸಾಹಿತ್ಯ ಸಂರಕ್ಷಿಸುವ ಕೆಲಸ ಮಾಡಿರುವುದು ಸ್ಮರಣೀಯ. ಸರ್ಕಾರದಿಂದ ಇದೇ ಮೊದಲ ವರ್ಷ ಅವರ ಜನ್ಮದಿನ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

‘ಇಡೀ ಸಾಹಿತ್ಯ ವಲಯದಲ್ಲಿ ವಚನ ಸಾಹಿತ್ಯ ಪ್ರಮುಖ ಪಾತ್ರ ವಹಿಸುತ್ತದೆ. ಇದು ಜನಸಾಮಾನ್ಯರ ಸಾಹಿತ್ಯ. ಇಂತಹ ವಚನಗಳ ಒಂದು ಸಾವಿರಕ್ಕೂ ಹೆಚ್ಚು ಪುಸ್ತಕ ಹೊರತಂದ ಏಕೈಕ ವ್ಯಕ್ತಿ ಫ.ಗು.ಹಳಕಟ್ಟಿ. ಹಿಂದೆ ಕೇವಲ 40 ವಚನ ಸಾಹಿತಿಗಳ ಮಾಹಿತಿ ಲಭ್ಯವಿತ್ತು. ಆದರೆ, ಇವರು 250ಕ್ಕೂ ಹೆಚ್ಚು ವಚನಕಾರರ ಸಾಹಿತ್ಯ ಸಂಗ್ರಹಿಸಿ ಪರಿಚಯಿಸಿದ್ದಾರೆ’ ಎಂದುಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್. ಸುಂದರರಾಜ್ ಹೇಳಿದರು.

ಬಸವಣ್ಣನವರ ವಚನಗಳನ್ನು ಇಂಗ್ಲಿಷ್‍ಗೆ ತರ್ಜುಮೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ವಚನ ಸಾಹಿತ್ಯಪರಿಚಯಿಸಿದವರಲ್ಲಿ ಹಳಕಟ್ಟಿ ಮೊದಲಿಗರು. ಸರ್ಕಾರ, ವಿಶ್ವವಿದ್ಯಾಲಯವೊಂದು ಮಾಡಬಹುದಾದ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಜಗತ್ತಿನಲ್ಲಿ ಶಕ್ತಿಶಾಲಿಯಾದ ಸಾಹಿತ್ಯವೆಂದರೆ ಅದು ವಚನ ಸಾಹಿತ್ಯ. ಇಂತಹ ವಚನ ಸಾಹಿತ್ಯ ಸಂರಕ್ಷಿಸಿದ ಫ.ಗು.ಹಳಕಟ್ಟಿ ಅವರ ಜನ್ಮದಿನ ನಿಮಿತ್ತ ಸರ್ಕಾರ ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ ಹಮ್ಮಿಕೊಂಡಿರುವುದು ವಿಶೇಷ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಬಾರಂದೂರು ಪ್ರಕಾಶ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಾಹಿತಿಗಳು, ಬಸವ ಕೇಂದ್ರ, ಬಸವ ಬಳಗದ ಪ್ರತಿನಿಧಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT