ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊರಬದಲ್ಲಿ ಜಾತ್ರೆ: ಮೂಲಸೌಕರ್ಯಕ್ಕೆ ಆದ್ಯತೆ ನೀಡಿ

ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಸೂಚನೆ
Last Updated 4 ಫೆಬ್ರುವರಿ 2023, 6:30 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನ ಐತಿಹಾಸಿಕ ಚಂದ್ರಗುತ್ತಿ ರೇಣುಕಾಂಬಾ ದೇವರ ಬ್ರಹ್ಮ ರಥೋತ್ಸವಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಬರುವ ಹಿನ್ನೆಲೆಯಲ್ಲಿ ಮೂಲಸೌಕರ್ಯಗಳ ಕೊರತೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಾಗರ ಉಪ ವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಸೂಚಿಸಿದರು.

ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಶುಕ್ರವಾರ ರೇಣುಕಾಂಬಾ ಜಾತ್ರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಾತ್ರೆಗೆ ವಿವಿಧ ಭಾಗಗಳಿಂದ ಜನರು ಒಂದು ವಾರದ ಮುಂಚೆಯೇ ಬರುವುದರಿಂದ ಕುಡಿಯುವ ನೀರು, ಸುಲಭ ಶೌಚಾಲಯ ವ್ಯವಸ್ಥೆಯನ್ನು ಅಗತ್ಯವಾಗಿ ಕಲ್ಪಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಹಿತಕರ ಘಟನೆಗಳು ನಡೆಯದಂತೆ ಬಂದೋಬಸ್ತ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಫೆಬ್ರುವರಿ 27, 28, 29ರಂದು ಜಾತ್ರೆ ನಡೆಯಲಿದ್ದು, ಫೆ. 25 ರಿಂದಲೇ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಗುವುದು. ಜಾತ್ರೆ ಸುಗಮವಾಗಿ ನಡೆಸಲು ಗ್ರಾಮ ಪಂಚಾಯಿತಿ, ದೇವಸ್ಥಾನ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಸಿಪಿಐ ಭಾಗ್ಯವತಿ, ಪಿಎಸ್‌ಐ ನಾಗರಾಜ್, ತಾಲ್ಲೂಕು ವೈದ್ಯಾಧಿಕಾರಿ ಪ್ರಭು ಸಾಹುಕಾರ್, ದೇವಸ್ಥಾನ ಅಡಳಿತ ಮಂಡಳಿ ಅಧ್ಯಕ್ಷ ಪ್ರಸನ್ನ ಶೇಟ್, ಚಂದ್ರಗುತ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಸದಸ್ಯರಾದ ರೇಣುಕಪ್ರಸಾದ್, ರತ್ನಾಕರ್, ರೇಣುಕಾಂಬಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್, ಪಿಡಿಒ ನಾಗೇಂದ್ರ, ಮುಜರಾಯಿ ಇಲಾಖೆಯ ಶ್ರುತಿ, ಶಿರಸ್ತೇದಾರ್ ನಾಗರಾಜ್, ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT