ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾತಿ ಪ್ರಮಾಣಪತ್ರ: ತಹಶೀಲ್ದಾರ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

Last Updated 21 ಸೆಪ್ಟೆಂಬರ್ 2021, 4:38 IST
ಅಕ್ಷರ ಗಾತ್ರ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಚಾಲಕನ ಹುದ್ದೆಗೆ ಅನುಕೂಲ ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪದ ಮೇಲೆ ತಹಶೀಲ್ದಾರ್ ಸೇರಿ ಐವರ ವಿರುದ್ಧ ಇಲ್ಲಿನ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಹಶೀಲ್ದಾರ್ ಸಿ.ಎನ್‌.ಮಂಜುನಾಥ್, ಕೊಟ್ರೇಶ್, ರಾಜಸ್ವ ನಿರೀಕ್ಷಕ ವಿಜಯಕುಮಾರ್, ಗ್ರಾಮಲೆಕ್ಕಿಗ ಎಚ್‌.ಸುರೇಶ್, ಮೈಸೂರು ವಿಭಾಗದ ಕೆಎಸ್‌ಆರ್‌ಟಿಸಿ ಚಾಲಕ ರಾಮಸ್ವಾಮಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ.

ಶಿವಮೊಗ್ಗ ತಾಲ್ಲೂಕು ಬಿ.ಬೀರನಹಳ್ಳಿ ಸಮೀಪದ ತರಗನಹಳ್ಳಿಯ ರಾಮಸ್ವಾಮಿ ಕೆಎಸ್‌ಆರ್‌ಟಿಸಿ ಚಾಲಕ ಹುದ್ದೆಗೆ ಸೇರಲು 2012ರಲ್ಲಿ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಪಡೆದಿದ್ದರು.

ಅವರು ಹಾವಾಡಿಗ ಸಮುದಾಯಕ್ಕೆ ಸೇರಿದ್ದರೂ ಕೆಲಸಗಿಟ್ಟಿಸಿಕೊಳ್ಳಲು ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ಅವರ ಜಾತಿಯ ಸಿಂಧುತ್ವ ಪರಿಶೀಲಿಸಬೇಕು ಎಂದು ಕೋರಿ ಜಿಲ್ಲಾಧಿಕಾರಿಗೆ ದೂರು ಬಂದಿತ್ತು. ವಿಚಾರಣೆ ನಡೆಸಿದ ಅಧಿಕಾರಿಗಳು ಜಾತಿ ಪ್ರಮಾಣಪತ್ರ ರದ್ದುಗೊಳಿಸಿದ್ದರು. ನಂತರ ಸಮಗ್ರ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯಕ್ಕೆ ಈಗ ಐವರ ವಿರುದ್ಧ ಪ್ರಕರಣ
ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT