ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಟುಂಬ ರಾಜಕಾರಣ ಕಾಂಗ್ರೆಸ್‌ನದ್ದು, ನಮ್ಮದಲ್ಲ: ಬಿ.ವೈ.ರಾಘವೇಂದ್ರ

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿಕೆ
Published 23 ಮಾರ್ಚ್ 2024, 15:49 IST
Last Updated 23 ಮಾರ್ಚ್ 2024, 15:49 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಕುಟುಂಬ ರಾಜಕಾರಣವು ಕಾಂಗ್ರೆಸ್‌ನ ವ್ಯವಸ್ಥೆಯೇ ಹೊರತು ನಮ್ಮದಲ್ಲ. ನಾನು ಸಂಸತ್ ಸದಸ್ಯ, ವಿಜಯಣ್ಣ (ಬಿ.ವೈ.ವಿಜಯೇಂದ್ರ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ. ಯಡಿಯೂರಪ್ಪ ಅವರು ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲ’ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ಇಲ್ಲಿನ ಹೊರವಲಯದ ಭೋವಿ ಗುರುಪೀಠಕ್ಕೆ ಶನಿವಾರ ಭೇಟಿ ನೀಡಿದ್ದ ಅವರಿಗೆ ಸುದ್ದಿಗಾರರು ‘ಕುಟುಂಬ ರಾಜಕಾರಣ’ದ ಕುರಿತು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು,‘ಯಾವುದೇ ಕುಟುಂಬದ ಹಿಡಿತದಲ್ಲಿ ರಾಜಕಾರಣ ಕೇಂದ್ರೀಕೃತವಾಗಿರಬಾರದು ಎಂಬುದು ಬಿಜೆಪಿ ಸಿದ್ಧಾಂತ. ಅದನ್ನು ನಾನೂ ಬೆಂಬಲಿಸುತ್ತೇನೆ’ ಎಂದರು. 

‘ರಾಷ್ಟ್ರ, ರಾಜ್ಯದಲ್ಲಿ ಒಂದೇ ಕುಟುಂಬದವರು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ಆಗಿದ್ದರೆ, ಆ ಮನೆಯಲ್ಲೇ ಪಕ್ಷದ ಆಗುಹೋಗುಗಳ ನಿರ್ಣಯ ಆಗುತ್ತಿದ್ದರೆ ಅದನ್ನು ಕುಟುಂಬ ರಾಜಕಾರಣ ಎಂದು ಹೇಳಲಾಗುತ್ತದೆ. ಇದಕ್ಕೆ ನೆಹರೂ, ಸೋನಿಯಾ ಗಾಂಧಿ ಮನೆತನವೇ ಸಾಕ್ಷಿ’ ಎಂದು ತಿಳಿಸಿದರು.

‘ಯಾವುದೋ ಒತ್ತಡದ ಕಾರಣಕ್ಕೆ ಪಕ್ಷ ನನಗೆ ಟಿಕೆಟ್ ಕೊಟ್ಟಿಲ್ಲ. ಕ್ಷೇತ್ರದಲ್ಲಿನ ಅಭಿವೃದ್ಧಿ, ಸಂಘಟನೆ ನೋಡಿ ಟಿಕೆಟ್‌ ನೀಡಿದೆ’ ಎಂದು ಸ್ಪಷ್ಟಪಡಿಸಿದರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಕುಂಚಿಟಿಗ ಮಹಾಸಂಸ್ಥಾನ ಮಠದ ಶಾಂತವೀರ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ನಾರಾಯಣ ಗುರುಪೀಠದ ರೇಣುಕಾನಂದ ಸ್ವಾಮೀಜಿ, ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಬಸವ ಪ್ರಸಾದ ಸ್ವಾಮೀಜಿ, ಕಾಶಿ ಅನ್ನಪೂರ್ಣೇಶ್ವರಿ ಮಠದ ಮಹಾಲಿಂಗ ಸ್ವಾಮೀಜಿ, ಶಿಕಾರಿಪುರ ವಿರಕ್ತಮಠದ ಚನ್ನಬಸವ ಸ್ವಾಮೀಜಿಯ ಆಶೀರ್ವಾದ ಪಡೆದರು.

ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶನಿವಾರ ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಮಠಾಧೀಶರ ಆಶೀರ್ವಾದ ಪಡೆದರು 
ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಶನಿವಾರ ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಮಠಾಧೀಶರ ಆಶೀರ್ವಾದ ಪಡೆದರು 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT