ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕಾರಿಪುರ | ರೈತ ಆತ್ಮಹತ್ಯೆ: ಕುಟುಂಬಕ್ಕೆ ವಿಜಯೇಂದ್ರ ಸಾಂತ್ವನ

Published 1 ಜುಲೈ 2024, 13:00 IST
Last Updated 1 ಜುಲೈ 2024, 13:00 IST
ಅಕ್ಷರ ಗಾತ್ರ

ನೆಲವಾಗಿಲು (ಶಿಕಾರಿಪುರ): ಗ್ರಾಮದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಬಸವರಾಜಪ್ಪ ಅವರ ಮನೆಗೆ ಸೋಮವಾರ ಭೇಟಿ ನೀಡಿದ ಶಾಸಕ ಬಿ.ವೈ. ವಿಜಯೇಂದ್ರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

‘ಧೈರ್ಯದಿಂದ ಜೀವನ ನಡೆಸಬೇಕು. ನಿಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಇತರೆ ಕಾರ್ಯಗಳಿಗೆ ಸ್ಪಂದಿಸುತ್ತೇನೆ’ ಎಂದ ಅವರು, ‘ಕುಟುಂಬಕ್ಕೆ ಆತ್ಮಹತ್ಯೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳದಲ್ಲಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ವೈಯಕ್ತಿಕವಾಗಿ ಧನ ಸಹಾಯ ನೀಡಿದರು.

ಮುಖಂಡರಾದ ಕೆ.ಎಸ್. ಗುರುಮೂರ್ತಿ, ನಿಂಬೆಗೊಂದಿ ಸಿದ್ದಲಿಂಗಪ್ಪ, ಸಂಕ್ಲಾಪುರ ಹನುಮಂತಪ್ಪ, ವೀರನಗೌಡ, ಮಾರವಳ್ಳಿ ಅಶೋಕ, ಬೆಣ್ಣೆ ಪ್ರವೀಣ್, ವಿನಯ್, ರವಿಕಾಂತ, ರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT