ಭಾನುವಾರ, ಸೆಪ್ಟೆಂಬರ್ 27, 2020
27 °C

ಶಿವಮೊಗ್ಗ: ಹಳ್ಳಕ್ಕೆ ಜಿಗಿದು ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸಾಲದ ಹೊರೆಯಿಂದ ನೊಂದು ಪುರದಾಳು ಗ್ರಾಮದ ರೈತ ಪದ್ಮಪ್ಪ (65) ಸೋಮವಾರ ಬಾರೆ ಹಳ್ಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ₹ 3.50 ಲಕ್ಷ ಸಾಲ ಮಾಡಿದ್ದರು. ಕೊರೊನಾ ಸಂಕಷ್ಟದ ಮಧ್ಯೆಯೂ ಬ್ಯಾಂಕ್ ಅಧಿಕಾರಿಗಳು ಸಾಲ ಕಟ್ಟುವಂತೆ ಫೋನ್ ಕರೆ ಮಾಡಿದ್ದರು. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ತುಂಗಾ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅವರಿಗೆ 4 ಎಕರೆ ಜಮೀನು ಇದೆ. ಇಬ್ಬರು ಮಕ್ಕಳು ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು