ರಿಪ್ಪನ್‌ಪೇಟೆ: ಅರಸಾಳು ಗ್ರಾಮದ ರೈತ ಸುರೇಶ್ (55 ) ಸಾಲದ ಹೊರೆಯಿಂದ ಮನೆ ಹಿಂಭಾಗದ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆನರಾ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು ₹ 8 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು.
ಸಕಾಲದಲ್ಲಿ ಸಾಲ ಮರುಪಾವತಿಸದ ಕಾರಣ ಬ್ಯಾಂಕ್ ನೋಟಿಸ್ ಜಾರಿ ಮಾಡಿತ್ತು. ಇದರಿಂದ ಮನನೊಂದ ಅವರು ಶನಿವಾರ ರಾತ್ರಿ ವಿಷ ಸೇವಿಸಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಈ ಕುರಿತು ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.