ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಮಾವೇಶ 24ರಂದು

Published 22 ಜೂನ್ 2024, 15:59 IST
Last Updated 22 ಜೂನ್ 2024, 15:59 IST
ಅಕ್ಷರ ಗಾತ್ರ

ಸಾಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೂನ್ 24ರಂದು ಶಿವಮೊಗ್ಗದಲ್ಲಿ ರೈತರ ಸಮಾವೇಶ ಏರ್ಪಡಿಸಲಾಗಿದೆ ಎಂದು ರೈತ ಸಂಘ (ಎಚ್.ಗಣಪತಿಯಪ್ಪ ಬಣ)ದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಮನೆಘಟ್ಟ ತಿಳಿಸಿದರು.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಬೆಳೆ ವಿಮೆ ನೀತಿ ಬದಲಾಯಿಸಬೇಕು. ಎನ್.ಡಿ.ಎಫ್ ಪರಿಹಾರದ ಮಾನದಂಡ ಬದಲಿಸಬೇಕು ಎಂಬುದೂ ಸೇರಿ ಹಲವು ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಚರ್ಚಿಸಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದರು.

ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದಾಗ್ಯೂ ರಾಷ್ಟ್ರೀಕೃತ ಹಾಗೂ ಸಹಕಾರ ಬ್ಯಾಂಕ್‌ಗಳು ಸಾಲ ಪಾವತಿ ಮಾಡದೆ ರೈತರ ಆಸ್ತಿ ಹರಾಜಿಗೆ ಮುಂದಾಗಿರುವುದು ಖಂಡನೀಯ. ಸಂಕಷ್ಟದಲ್ಲಿರುವ ರೈತರಿಗೆ ಸಾಲ ಮರು ಪಾವತಿ ಮಾಡಲು ಕಾಲಾವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರಮುಖರಾದ ಭದ್ರೇಶ್ ಬಾಳಗೋಡು, ಮೇಘರಾಜ ಪಡವಗೋಡು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT