ಮಂಗಳವಾರ, ಮೇ 17, 2022
24 °C

ಶಿವಮೊಗ್ಗ: ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ದೇಶದಾದ್ಯಂತ ರೈತರು ನಡೆಸುತ್ತಿರುವ ರೈಲ್ ರೋಖೋ ಚಳವಳಿ ಅಂಗವಾಗಿ ಗುರುವಾರ ಶಿವಮೊಗ್ಗ ರೈಲ್ವೆ ನಿಲ್ದಾಣ ಎದುರು ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆ ರೈತರು ಪ್ರತಿಭಟನಾ ಸಭೆ ನಡೆಸಿದರು.

ಗುರುವಾರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನಾನಿರತ ರೈತರನ್ನು ರೈಲು ನಿಲ್ದಾಣದ ಒಳಗೆ ಬರಲು ಬಿಡದೆ ತಡೆ ಹಿಡಿಯಲಾಯಿತು.

ನಿಲ್ದಾಣಕ್ಕೆ ಪೊಲೀಸ್ ಬಂದೋಬಸ್ತ್:‌

ರೈಲ್ ರೋಖೋ ಚಳವಳಿಯ ಅಂಗವಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ರೈಲ್ವೆ ನಿಲ್ದಾಣದ ಮುಖ್ಯದ್ವಾರದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಪ್ರಯಾಣಿಕರನ್ನು ಮಾತ್ರ ಒಳಬಿಡಲಾಗುತ್ತಿತ್ತು. ಪ್ರತಿಭಟನೆ ನಡೆಸಲು ಬಂದ ರೈತರನ್ನು ಪೊಲೀಸರು ಮುಖ್ಯದ್ವಾರದಲ್ಲೇ ತಡೆದರು.

ರೈತರು–ಪೊಲೀಸರ ನಡುವೆ ಮಾತಿ ಚಕಮಕಿ: ನಿಲ್ದಾಣದ ಮುಖ್ಯದ್ವಾರದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ರೈಲ್ ರೋಖೋಗೆ ಅವಕಾಶ ನೀಡುವಂತೆ ರೈತರು ಪಟ್ಟು ಹಿಡಿದರೆ, ನಿಲ್ದಾಣದ ಒಳಗೆ ಬಿಡಲು ಪೊಲೀಸರು ಒಪ್ಪಲಿಲ್ಲ. ಈ ವೇಳೆ ಬೇಕಾದರೆ ತಮ್ಮನ್ನು ಬಂಧಿಸಿ, ಪ್ರಕರಣ ದಾಖಲಿಸಿ. ಆದರೆ, ರೈಲು ನಿಲ್ದಾಣದ ಒಳಗೆ ಬಿಡಿ ಎಂದು ರೈತರು ಆಗ್ರಹಿಸಿದರು.

ಆವರಣದಲ್ಲಿ ಪ್ರತಿಭಟನೆಗೆ ಅವಕಾಶ:

ರೈಲ್ ರೋಖೋಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ ಪೊಲೀಸರು, ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನಾ ಸಭೆಗೆ ಅವಕಾಶ ನೀಡಿದರು.

ರೈತ ಮುಖಂಡ ಕೆ.ಟಿ.ಗಂಗಾಧರ್, ‘ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ರೈತರು ಸಂಕಷ್ಟಕ್ಕೀಡಾಗಬೇಕಾಗುತ್ತದೆ’ ಎಂದರು.

ಪ್ರಗತಿಪರ ಸಂಘಟನೆಗಳ ಮುಖಂಡ ಕೆ.ಎಲ್. ಅಶೋಕ್, ಹಾಲೇಶಪ್ಪ, ರೈತ ಸಂಘದ ವೀರೇಶ್,  ಶಿವಮೂರ್ತಿ, ಹಿಟ್ಟೂರು ರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು