ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ರೈತರ ಪ್ರತಿಭಟನೆ

Last Updated 13 ಡಿಸೆಂಬರ್ 2022, 5:50 IST
ಅಕ್ಷರ ಗಾತ್ರ

ಸೊರಬ: ಅಸಮರ್ಪಕ ವಿದ್ಯುತ್ ಪೂರೈಕೆಗೆ ಕಡಿವಾಣ ಹಾಕುವಂತೆ ಹಾಗೂ ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ಕೃಷಿ ಕಾಯ್ದೆ ಹಿಂಪಡೆಯಲು ಮೀನ–ಮೇಷ ಎಣಿಸಲಾಗುತ್ತಿದೆ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಚಿವರಿಗೆ ರೈತರ ಕಷ್ಟ ಗೊತ್ತಿಲ್ಲ. ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ವಿದ್ಯುತ್‌ ಖಾಸಗೀಕರಣ ಬಿಲ್‌ ಹಿಂಪಡೆಯಬೇಕು. ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಬಾರದು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ರೈತರಿಗೆ ಮಾರಕವಾದ ಕಾಯ್ದೆಗಳನ್ನು ರದ್ದುಪಡಿಸುವಂತೆ ಮನವಿ ಮಾಡಿದರೂ ಸರ್ಕಾರಗಳು ಗಮನ ಹರಿಸಿಲ್ಲ. ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಬೆಳೆ ವಿಮಾ ಕಂಪನಿಗಳು ರೈತರಿಂದ ಹಣ ಕಟ್ಟಿಸಿಕೊಂಡು ವಿಮಾ ಹಣವನ್ನು ನೀಡದೇ ವಂಚಿಸುತ್ತಿದ್ದಾರೆ. ಅಂತಹ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಾಗಲೇ ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ರೈತರ ಬೆಳೆಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು. ರೈತ ಸಂಘದ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ನಿಸರಾಣಿ, ಉಮೇಶ್ ಪಾಟೀಲ್, ಮಂಜುನಾಥ್ ಅರೆಕೊಪ್ಪ, ಸೈಯದ್ ಶಫಿವುಲ್ಲಾ, ತಾಲ್ಲೂಕು ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಕಾರ್ಯಧ್ಯಕ್ಷ ಶಿವಪ್ಪ ಹುಣಸಳ್ಳಿ, ಮೇಘರಾಜ್, ಶಿವಮೂರ್ತಿ ಸಾಹುಕಾರ, ಫಾಲಾಕ್ಷಪ್ಪ, ಹುಚ್ಚಪ್ಪ, ಹಿರಿಯಪ್ಪ, ಸೋಮಶೇಖರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT