ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಮ್ನಿ ಓಡಿಸಿದ ಪುತ್ರ, ಅಪ್ಪನಿಗೆ ₹25 ಸಾವಿರ ದಂಡ!

Published 12 ಸೆಪ್ಟೆಂಬರ್ 2023, 5:05 IST
Last Updated 12 ಸೆಪ್ಟೆಂಬರ್ 2023, 5:05 IST
ಅಕ್ಷರ ಗಾತ್ರ

ಶಿವಮೊಗ್ಗ: ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮ್ನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹ 25 ಸಾವಿರ ದಂಡ ವಿಧಿಸಿದೆ.

ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು. ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ ಬಿ.ಎಚ್.ರಸ್ತೆಯಲ್ಲಿ ಶಿವಮೊಗ್ಗ ಪೂರ್ವ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ಎಚ್.ಎಸ್.ಶಿವಣ್ಣನವರ್ ವಾಹನ ತಪಾಸಣೆ ನಡೆಸಿದ್ದು, ಒಮ್ನಿ ವಾಹನವನ್ನು ಪರವಾನಗಿ ಇಲ್ಲದೇ ಬಾಲಕ ಓಡಿಸಿ ನಿಯಮ ಉಲ್ಲಂಘನೆ ಮಾಡಿರುವುದು ಗೊತ್ತಾಗಿದೆ.

ಹೀಗಾಗಿ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಿಕೊಂಡು ಚಾಲನೆಗೆ ಅರ್ಹತೆ ಹೊಂದಿರದ ಪುತ್ರನಿಗೆ ವಾಹನ ನೀಡಿದ್ದ ತಂದೆಯ ವಿರುದ್ಧ ನ್ಯಾಯಾಲಯಕ್ಕೆ ಪೊಲೀಸರು ದೋಷಾರೋಪ ವರದಿ ಸಲ್ಲಿಸಿದ್ದರು. ನ್ಯಾಯಾಧೀಶರು ದಂಡ ವಿಧಿಸಿ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT