ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನುಗಾರರು ಮಕ್ಕಳಿಗೆ ಶಿಕ್ಷಣ ಕೊಡಿಸಿ: ಸಂಸದ ಬಿ.ವೈ. ರಾಘವೇಂದ್ರ ಸಲಹೆ

Published 8 ಜನವರಿ 2024, 13:37 IST
Last Updated 8 ಜನವರಿ 2024, 13:37 IST
ಅಕ್ಷರ ಗಾತ್ರ

ಶಿಕಾರಿಪುರ: ಮೀನುಗಾರರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಶಿಕ್ಷಿತರನ್ನಾಗಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.

ತಾಲ್ಲೂಕಿನ ಕವಾಸಪುರ ಗ್ರಾಮ ಸಮೀಪದ ಮದಗದ ಕೆರೆಯಲ್ಲಿ ಈಚೆಗೆ ಮೀನುಮರಿ ಬಿತ್ತನೆ ಕಾರ್ಯಕ್ರಮ ಮತ್ತು ಮೀನುಗಾರರಿಗೆ ಸಲಕರಣೆ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ನೀರಾವರಿ ಯೋಜನೆ ಮೂಲಕ ತಾಲ್ಲೂಕಿನ ಕೆರೆಗಳನ್ನು ಭರ್ತಿ ಮಾಡಿದ್ದರಿಂದ ಮೀನು ಸಾಕಾಣಿಕೆಗೆ ಅನುಕೂಲವಾಗಿದೆ. ಜೀವದ ಹಂಗು ತೊರೆದು ಮೀನುಗಾರಿಕೆ ಮಾಡುತ್ತಿರುವ ಮೀನುಗಾರರು ಶ್ರಮಜೀವಿಗಳಾಗಿದ್ದಾರೆ. ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ವಾಭಿಮಾನದ ಬದುಕನ್ನು ಸಾಗಿಸಬೇಕು ಎಂದು ಸಲಹೆ ನೀಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ರಾಜ್ಯ ಉಗ್ರಾಣ ನಿಗಮ ಮಾಜಿ ಅಧ್ಯಕ್ಷ ಎಚ್.ಟಿ. ಬಳೆಗಾರ್, ರಾಜ್ಯ ಮೀನುಗಾರಿಕೆ ಸಹಕಾರ ಮಂಡಳಿ ನಿರ್ದೇಶಕ ಪಿ.ರಾಮಯ್ಯ, ಮೀನುಗಾರಿಕೆ ಇಲಾಖೆ ಶಿವಮೊಗ್ಗ ವಲಯ ಜಂಟಿ ನಿರ್ದೇಶಕ ಗಿರೀಶ್, ಉಪನಿರ್ದೇಶಕ ಶಿವಕುಮಾರ್, ಸಹಾಯಕ ನಿರ್ದೇಶಕರು ವಿನಯ್, ಗ್ರಾಮ ಪಂಚಾಯಿತಿ ಸದಸ್ಯರಾದ ಚನ್ನಪ್ಪ, ಜಮೀರ್ ಅಹ್ಮದ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT