ಬುಧವಾರ, ಮೇ 25, 2022
27 °C

ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ಐದು ದಿನ ರಜೆ- ಸಚಿವ ಕೆ.ಎಸ್.ಈಶ್ವರಪ್ಪ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ವಿದ್ಯಾರ್ಥಿಗಳಿಗೂ ಕೋವಿಡ್‌ ಹರಡುತ್ತಿರುವ ಕಾರಣ ಜ.19ರಿಂದ 23ರವರೆಗೆ ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

1ರಿಂದ 9ನೇ ತರಗತಿಯವರೆಗೆ ರಜೆ ಅನ್ವಯವಾಗಲಿದೆ. ಪರೀಕ್ಷಾ ದೃಷ್ಟಿಯಿಂದ 10ನೇ ತರಗತಿಗಳನ್ನು ನಿಯಮ ಪಾಲಿಸಿ ನಡೆಸಲು ಅನುಮತಿ ನೀಡಲಾಗಿದೆ. ಜಿಲ್ಲೆಯ ಉಳಿದ ಶಾಲೆಗಳಿಗೆ ಈ ರಜೆ ಅನ್ವಯವಾಗದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಂಗಳವಾರ ಮಾಹಿತಿ ನೀಡಿದರು.

ಮೂರು ದಿನ ಅಧಿಕೃತವಾಗಿ ರಜೆ ಘೋಷಿಸಲಾಗಿದ್ದು, ಶನಿವಾರ, ಭಾನುವಾರ ವಾರಾಂತ್ಯದ ಕರ್ಫ್ಯೂ ಇರುತ್ತದೆ. ಶಾಲೆಗಳು ಜ.24ರಿಂದ ಪುನಾರಂಭಗೊಳ್ಳುತ್ತವೆ.

ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳ 115 ವಿದ್ಯಾರ್ಥಿಗಳಿಗೆ ಹಾಗೂ 26 ಶಿಕ್ಷಕರಿಗೆ, ಕಾಲೇಜು ಹಂತದ 35 ವಿದ್ಯಾರ್ಥಿಗಳು ಹಾಗೂ 6 ಶಿಕ್ಷಕರಿಗೆ ಕೋವಿಡ್‌ ದೃಢಪಟ್ಟಿದೆ. 5 ಶಾಲೆಗಳು, 4 ಕಾಲೇಜುಗಳನ್ನು ಒಂದು ವಾರ ತಾತ್ಕಾಲಿಕವಾಗಿ ಸೀಲ್‍ಡೌನ್ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು