ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ವಿಮಾನ ನಿಲ್ದಾಣಕ್ಕೆ 72 ಪ್ರಯಾಣಿಕರ ಹೊತ್ತು ತಂದ ಮೊದಲ ವಿಮಾನ

Published 31 ಆಗಸ್ಟ್ 2023, 7:05 IST
Last Updated 31 ಆಗಸ್ಟ್ 2023, 7:05 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ 72 ಪ್ರಯಾಣಿಕರನ್ನು ಹೊತ್ತ ಮೊದಲ ಇಂಡಿಗೊ ವಿಮಾನ ಗುರುವಾರ ಬೆಳಿಗ್ಗೆ 11.05ಕ್ಕೆ ಬಂದಿಳಿಯಿತು.

ಆ ಮೂಲಕ ಮಲೆನಾಡಿನಲ್ಲಿ ಲೋಹದ ಹಕ್ಕಿಯ ಕಲರವ ಅಧಿಕೃತವಾಗಿ ಆರಂಭವಾಯಿತು.

ಮೊದಲ ವಿಮಾನದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಸಚಿವ ಎಂ.ಬಿ.ಪಾಟೀಲ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಬೇಳೂರು ಗೋಪಾಲಕೃಷ್ಣ, ಬಿ.ವೈ.ವಿಜಯೇಂದ್ರ, ಎಸ್.ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಮಾಜಿ ಶಾಸಕ ಹರತಾಳು ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ ಬಂದಿಳಿದರು.

ಮೊದಲ ವಿಮಾನದಲ್ಲಿ ಬಂದ ಪ್ರಯಾಣಿಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ವಾಗತಿಸಿದರು.

ನಂತರ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಸರಳ ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣದ ವೆಬ್ಸೈಟ್ ಗೆ ಸಚಿವ ಎಂ.ಬಿ.ಪಾಟೀಲ ಚಾಲನೆ ನೀಡಿದರು. ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟ ರೈತರ ಪರವಾಗಿ ಇಬ್ಬರನ್ನು ಬಿ.ಎಸ್.ಯಡಿಯೂರಪ್ಪ ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT