ಮಂಗಳವಾರ, ಮೇ 18, 2021
22 °C
ಪಂಚಾಯಿತಿ ಪ್ರತಿನಿಧಿಗಳಿಗೆ ಶಾಸಕ ಎಚ್. ಹಾಲಪ್ಪ ಹರತಾಳು ಸಲಹೆ

ನೀರಿನ ಸಮಸ್ಯೆಯಾಗದಂತೆ ಗಮನಹರಿಸಿ: ಶಾಸಕ ಎಚ್. ಹಾಲಪ್ಪ ಹರತಾಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಗ್ರಾಮೀಣ ಭಾಗದಲ್ಲಿ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪಂಚಾಯಿತಿ ಪ್ರತಿನಿಧಿಗಳು, ಅಧಿಕಾರಿಗಳು ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಕಿವಿಮಾತು ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಪೂರೈಕೆ ಸೇರಿ ಹಲವು ವಿಷಯಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶರಾವತಿ ಹಿನ್ನೀರಿನಿಂದ ಸಾಗರ ನಗರಕ್ಕೆ ಕುಡಿಯುವ ನೀರು ತರುವ ಯೋಜನೆಯ ಮಾರ್ಗ ಮಧ್ಯದ 28 ಹಳ್ಳಿಗಳಿಗೆ ನೀರು ಪೂರೈಸುವ ಯೋಜನೆ ಕಾರ್ಯಾರಂಭಗೊಂಡಿದೆ. ಗೌತಮಪುರ-ಆನಂದಪುರಂ ಭಾಗಕ್ಕೆ ಅಂಬ್ಲಿಗೊಳ ಜಲಾಶಯದಿಂದ ನೀರು ಪೂರೈಸುವ ಯೋಜನೆ ಸಿದ್ಧಗೊಂಡಿದೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸಬೇಕಿದೆ. ಕಳೆದ ವರ್ಷ ಮಂಗನ ಕಾಯಿಲೆ ಹೆಚ್ಚಿನ ಪ್ರಮಾಣದಲ್ಲಿ ಕಾಣಸಿಕೊಂಡಿದ್ದ ಪ್ರದೇಶದಲ್ಲಿ ಈವರೆಗೂ ಒಂದೂ ಪ್ರಕರಣ ವರದಿಯಾಗಿಲ್ಲ. ಹಾಗೆಂದು ಮೈಮರೆಯುವಂತಿಲ್ಲ. ಅಧಿಕಾರಿಗಳು ಈ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಸುವರ್ಣ ಟೀಕಪ್ಪ, ಎಪಿಎಂಸಿ ಅಧ್ಯಕ್ಷ ಚೇತನ್ ರಾಜ್ ಕಣ್ಣೂರು, ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಕಮ್ಮಾರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು