ಶಿವಮೊಗ್ಗ: ‘ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಹಾಗಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ’ ಎಂದು ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಭಿಪ್ರಾಯಪಟ್ಟರು.

ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಫುಟ್ಬಾಲ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ, ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.

ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ಧಿಮಟ್ಟ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು.

ಸೇಕ್ರೆಡ್ ಹಾರ್ಟ್ ಶಾಲೆಯ ಕಾರ್ಯದರ್ಶಿ ಫಾದರ್ ರೋಷನ್ ಪಿಂಟೊ ಮಾತನಾಡಿ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್,ಟಿವಿ ಹಾವಳಿಯಿಂದ ಕ್ರೀಡೆಗೆ ಪ್ರಾಮುಖ್ಯತೆ ನೀಡುವುದು ಕಡಿಮೆಯಾಗುತ್ತಿದೆ. ಓದಿಗೆ ಕೊಡುವಷ್ಟು ಪ್ರಾಮುಖ್ಯತೆ, ಪಠ್ಯೇತರ ಚಟುವಟಿಕೆಗೂ ಕೊಡಬೇಕು ಎಂದರು.

‘ಅಂಕಗಳು ಒಮ್ಮೊಮ್ಮೆ ಹೆಚ್ಚು ಕಡಿಮೆ ಆಗುತ್ತವೆ. ಇಂತಹ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗುತ್ತಾರೆ. ಆದರೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಇಂತಹ ನ್ಯೂನತೆಗಳಿಂದ ದೂರವಾಗಬಹುದು’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಸೇಕ್ರೆಡ್ ಹಾರ್ಟ್ ಸಂಸ್ಥೆಯ ವ್ಯವಸ್ಥಾಪಕ ಫಾದರ್ ಸ್ಟ್ಯಾನಿ ಡಿಸೋಜಾ, ಕ್ಯಾಂಪಸ್ ಡೈರೆಕ್ಟರ್ ಫಾದರ್ ಪ್ರಾನ್ಸಿಸ್ ನರೊನ್ಹಾ, ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಳ್ಳೇಕೆರೆ ಸಂತೋಷ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಆರ್. ಮಂಜುನಾಥ, ಶಾಲೆಯ ಹಳೆಯ ವಿದ್ಯಾರ್ಥಿ ಹರ್ಷ, ಕೆಪಿಟಿಸಿಎಲ್ ನ ಮೋಹನ್ ಕುಮಾರ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ನಿವೃತ್ತ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಿರಂಜನ ಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.