ಸೋಮವಾರ, ಜನವರಿ 24, 2022
28 °C

ಶಿವಮೊಗ್ಗ | 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ: ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಜ.10ರಿಂದ ಕೋವಿಡ್ ಪ್ರತಿಬಂಧಕ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೆ.ಎಸ್. ಮೋಹನ್ ತಿಳಿಸಿದ್ದಾರೆ.

ಎರಡನೇ ಡೋಸ್ ಪಡೆದು 9 ತಿಂಗಳು ಅಥವಾ 39 ವಾರ ಕಳೆದ 60 ವರ್ಷ ಮೇಲ್ಪಟ್ಟವರು ಹಾಗೂ ಮುಂಚೂಣಿ ಕಾರ್ಯಕರ್ತರು ಬೂಸ್ಟರ್ ಡೋಸ್ ಪಡೆಯಲು ಅವಕಾಶವಿದೆ. ಇದಲ್ಲದೆ ದೇವರಾಜ ಅರಸು ಸಭಾಭವನದಲ್ಲಿ ಕೋವಿಶೀಲ್ಡ್, ಸುಭಾಷ್ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕೋವಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಬೆಳಿಗ್ಗೆ 10 ಗಂಟೆಯಿಂದ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ತಾಲ್ಲೂಕಿನಲ್ಲಿ 60 ವರ್ಷ ಮೇಲ್ಪಟ್ಟ 20744 ಮಂದಿ ಕೋವಿಶೀಲ್ಡ್, 1868 ಮಂದಿ ಕೋವಾಕ್ಸಿನ್ ಲಸಿಕೆ ಪಡೆದಿದ್ದಾರೆ. ಇವರೆಲ್ಲರೂ ಬೂಸ್ಟರ್ ಡೋಸ್ ಪಡೆಯಬೇಕು. 60 ವರ್ಷ ಮೇಲ್ಪಟ್ಟವರಿಗೆ ಬಿಪಿ, ಶುಗರ್, ಅಸ್ತಮಾ, ಟಿಬಿ ಮೊದಲಾದ ಕಾಯಿಲೆ ತೀವ್ರ ಸ್ವರೂಪದಲ್ಲಿದ್ದರೆ ಅಂತಹವರಿಗೆ ಆದ್ಯತೆ ಮೇಲೆ ಲಸಿಕೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿಬಂದ ಈ ಭಾಗದ ಕೆಲವರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ. ತಾಲ್ಲೂಕಿನಿಂದ ಮೂರು ಬಸ್ ನಲ್ಲಿ ಓಂ ಶಕ್ತಿ ಯಾತ್ರೆಗೆ ಹೋಗಿದ್ದರು ಎನ್ನುವ ಮಾಹಿತಿ ಇದೆ. ಯಾತ್ರೆಗೆ ಹೋಗಿ ಬಂದವರಲ್ಲಿ ರೋಗ ಲಕ್ಷಣವಿದ್ದರೆ ತಕ್ಷಣ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾಗಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.