ಬುಧವಾರ, ಮಾರ್ಚ್ 22, 2023
27 °C

ಕುಂಸಿ: ಕಾಲುವೆ ಒತ್ತುವರಿ ತೆರವಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಂಸಿ: ಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕುಂಸಿ ಸಮೀಪದ ಮಂಡಘಟ್ಟ ಗ್ರಾಮ ಪಂಚಾಯಿತಿ ಕಚೇರಿ ಎದುರು ಗುರುವಾರ ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸಿದರು.

‘ರಾಜ ಕಾಲುವೆ ಒತ್ತುವರಿಯಾಗಿದ್ದು, ಗ್ರಾಮದ ಮನೆಗಳಿಗೆ ಮಳೆ ನೀರು ನುಗ್ಗುತ್ತಿದೆ. ಇದರಿಂದ ಪ್ರತಿವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ ನಾಲ್ಕು ವರ್ಷಗಳಿಂದಲೂ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ’ ಎಂದು ಉಮೇಶ್‌ ದೂರಿದರು.

‘ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಡಿ.26ರಂದು ಉಪವಾಸ ಸತ್ಯಾಗ್ರಹ ನಡೆಸಿದಾಗ ತಾಲ್ಲೂಕು ಪಂಚಾಯಿತಿ ನಿರ್ವಹಣಾಧಿಕಾರಿ ಅವಿನಾಶ್ ಒಂದು ತಿಂಗಳಲ್ಲಿ ಅವರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಗಡುವು ಮುಗಿದರೂ ಸಮಸ್ಯೆ ಬಗೆಹರಿದಿಲ್ಲ’ ಎಂದು ಆರೋಪಿಸಿದರು.

ಸಮಸ್ಯೆ ಸರಿಪಡಿಸುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು