ಸಾಗರ: ಮಾಜಿ ಶಾಸಕ ಎಲ್ ಟಿ ತಿಮ್ಮಪ್ಪ ಹೆಗಡೆ (94) ಮಂಗಳವಾರ ಬೆಳಗಿನ ಜಾವ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ.ಅವರಿಗೆ ಇಬ್ಬರು ಪುತ್ರರು ಇದ್ದಾರೆ.

1978, 1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಾಗರ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅವರು ಗೆಲುವು ಕಂಡಿದ್ದರು. ಸಹಕಾರ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಈ ಭಾಗದ ಹಲವು ಸಂಘ ಸಂಸ್ಥೆಗಳ ಹುಟ್ಟಿಗೆ ಕಾರಣರಾಗಿದ್ದರು.

ಆಪ್ಸ್ ಕೋಸ್, ತೋಟಗಾರ್ಸ್, ಅಡಿಕೆ ಬೆಳೆಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸಂಸ್ಥಾಪಕ ಉಪಾಧ್ಯಕ್ಷರಾಗಿ , ಹಟ್ಟಿಯಂಗಡಿಯ ಸಿದ್ದಿವಿನಾಯಕ ದೇವಸ್ಥಾನ ಹಾಗು ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ರಾಜಕಾರಣದಲ್ಲಿ ಧೀರ್ಘಕಾಲವಿದ್ದರೂ , ಯಾವುದೇ ವಿವಾದಕ್ಕೆ ಸಿಲುಕದೇ ಅಜಾತಶತ್ರು ಎಂಬ ಹೆಗ್ಗಳಕೆಗೆ ಪಾತ್ರರಾಗಿದ್ದರು.

ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಡಸೂರು ಲಿಂಗದಹಳ್ಳಿ ಗ್ರಾಮದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.