ಸಾಗರ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹೊರತು ಯಾವ ಕಾಮಗಾರಿಯ ಶಂಕುಸ್ಥಾಪನೆಯನ್ನು ಮಾಡಿಲ್ಲ. ಆದರೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ಹೇಳಿದರು.
ಇಲ್ಲಿನ ಲೋಕೋಪಯೋಗಿ ಇಲಾಖೆ ಎಪಿಎಂಸಿ ಪ್ರಾಂಗಣದಲ್ಲಿ ₹ 1.17 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಕೃಷಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಕಟ್ಟಡ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ 1500 ಕ್ಕೂ ಹೆಚ್ಚು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಇವುಗಳನ್ನು ಚುನಾವಣೆ ಹತ್ತಿರವಿದೆ ಎಂದು ನಡೆಸಲಾಗುತ್ತಿಲ್ಲ. ಈ ಮೊದಲೇ ಸರ್ಕಾರಕ್ಕೆ ಪ್ರಸ್ತಾವನ ಕಳುಹಿಸಿ ಅನುದಾನ ಮಂಜೂರಾದ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಯ ವೇಗವನ್ನು ಸಹಿಸದ ಕೆಲವರು ಸುಳ್ಳು ಹೇಳಿಕೆ ನೀಡಿ ಸಾರ್ವಜನಿಕರನ್ನು ಹಾದಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ದೂರಿದರು.
ಕೃಷಿ ಇಲಾಖೆಯ ಉಪ ನಿರ್ದೇಶಕ ಡಿ.ಎಂ.ಬಸವರಾಜ್, ಸಹಾಯಕ ನಿರ್ದೇಶಕ ಕಾಶಿನಾಥ್ ಒಂಟೇಕರ್, ಪ್ರಮುಖರಾದ ದೇವೇಂದ್ರಪ್ಪ ಯಲಕುಂದ್ಲಿ, ವಿನಾಯಕ ರಾವ್ ಬೇಳೂರು, ಅನಿಲ್, ಸುನೀಲ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.