ಶನಿವಾರ, ಮೇ 28, 2022
27 °C
ಕೆಪಿಸಿಸಿ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಹೇಳಿಕೆ

ಕಾಗೋಡು ತಿಮ್ಮಪ್ಪ ಹೆಸರಿನಲ್ಲಿ ಫೌಂಡೇಷನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ‘ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ರಾಜಕೀಯ ಜೀವನದ ಆಶಯಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ನೂತನ ಫೌಂಡೇಷನ್ ಸ್ಥಾಪಿಸಲಾಗಿದೆ’ ಎಂದು ಕೆಪಿಸಿಸಿ ಕಾರ್ಯದರ್ಶಿ ಡಾ.ರಾಜನಂದಿನಿ ಕಾಗೋಡು ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮುದಾಯದ ಪ್ರಗತಿಗಾಗಿ ದಿಟ್ಟ ಹೆಜ್ಜೆ’ ಎಂಬ ಘೋಷವಾಕ್ಯದಡಿ ನೂತನ ಸಂಸ್ಥೆಯನ್ನು ಹುಟ್ಟುಹಾಕಲಾಗಿದೆ. ತಮ್ಮ ಜೀವನದುದ್ದಕ್ಕೂ ಸಾಮಾಜಿಕ ನ್ಯಾಯದ ಆಶಯಗಳನ್ನು ಸಾಕಾರಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿರುವ ಕಾಗೋಡು ಕುರಿತು ಪ್ರೊ.ಹೀ.ಚಿ. ಬೋರಲಿಂಗಯ್ಯ ಅವರು ಕೃತಿಯೊಂದನ್ನು ರಚಿಸುತ್ತಿದ್ದಾರೆ. ಸಿರಿಗಂಧ ಶ್ರೀನಿವಾಸ ಮೂರ್ತಿ ಅವರು ಕಾಗೋಡು ಕುರಿತು ಸಾಕ್ಷ್ಯಚಿತ್ರವೊಂದನ್ನು ತಯಾರಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಸೇರಿ ಹಲವು ಸಾಮಾಜಿಕ ಸೇವಾ ಚಟುವಟಿಕೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸಾಹಿತಿ ಹೀ.ಚಿ. ಬೋರಲಿಂಗಯ್ಯ, ‘ಏಳು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ತಿಮ್ಮಪ್ಪ ಅವರು ಕಾಗೋಡು ಸತ್ಯಾಗ್ರಹದ ಆಶಯಗಳನ್ನು ಭೂಸುಧಾರಣಾ ಕಾಯ್ದೆ ಜಾರಿಗೆ ಬರುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ವಾಸ್ತವಕ್ಕೆ ಇಳಿಸಿದ್ದಾರೆ. ಯುವಜನರಿಗೆ ಅವರ ಸಾಧನೆಯನ್ನು ತಿಳಿಸಿಕೊಡುವ ನಿಟ್ಟಿನಲ್ಲಿ ಅವರ ಜೀವನ ಚರಿತ್ರೆಯನ್ನು ದಾಖಲಿಸಲಾಗುತ್ತಿದೆ’ ಎಂದರು.

ಚಿತ್ರ ನಿರ್ದೇಶಕ ಸಿರಿಗಂಧ ಶ್ರೀನಿವಾಸ ಮೂರ್ತಿ, ಕನ್ನಡ, ಇಂಗ್ಲಿಷ್, ಹಿಂದಿ ಹೀಗೆ ಮೂರು ಭಾಷೆಯಲ್ಲಿ ಕಾಗೋಡು ತಿಮ್ಮಪ್ಪ ಅವರ ಸಾಧನೆಗಳ ಕುರಿತು ಸಾಕ್ಷ್ಯಚಿತ್ರ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖರಾದ ಮಧು ಮಾಲತಿ, ಎನ್.ಲಲಿತಮ್ಮ, ವೆಂಕಟೇಶ್ ಮೆಳವರಿಗೆ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು