ನಾಲ್ವರಿಗೆ ಕೊರೊನಾ 14 ಮಂದಿ ಗುಣಮುಖ
ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ 14 ಜನರು ಗುಣಮುಖರಾಗಿದ್ದು, 4 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
1,538 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 1726 ಮಂದಿಯ ವರದಿ ನೆಗೆಟಿವ್ ಬಂದಿದೆ.
ಮನೆಗಳಲ್ಲಿ 94 ಸೇರಿ ಒಟ್ಟು 121 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್ನಿಂದ 348 ಜನರು ಮೃತಪಟ್ಟಿದ್ದಾರೆ. ಭದ್ರಾವತಿಯಲ್ಲಿ ಇಬ್ಬರು, ಶಿವಮೊಗ್ಗ ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ತಲಾ ಇಬ್ಬರಿಗೆ ಸೋಂಕು ತಗುಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.