ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಾಳಿಪಟ– 2’ ಆ. 12ರಂದು ಬಿಡುಗಡೆ- ಮಡೆನೂರು ಮನು

Last Updated 3 ಆಗಸ್ಟ್ 2022, 5:53 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಗಾಳಿಪಟ–2’ ಚಿತ್ರ ಆಗಸ್ಟ್ 12ರಂದು ರಾಜ್ಯದ 250 ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ ಎಂದು ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾಮತ್ತು ಮಡೆನೂರು ಮನು ತಿಳಿಸಿದರು.

‘ನಾವು ಈ ಸಿನಿಮಾದಲ್ಲಿ ನಟಿಸಿಲ್ಲ. ನಿರ್ದೇಶಕ ಯೋಗರಾಜ್‌ ಭಟ್‌ ಗರಡಿಯಲ್ಲಿ ಬೆಳೆದಿರುವ ಕಾರಣ ಅವರ ಮೇಲಿನ ಅಭಿಮಾನ ಹಾಗೂ ಕನ್ನಡ ಚಿತ್ರ ಪ್ರೋತ್ಸಾಹಿಸಬೇಕು ಎಂಬ ಉದ್ದೇಶದಿಂದ ಚಿತ್ರದ ಪ್ರಚಾರ ನಡೆಸುತ್ತಿದ್ದೇವೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಗಾಳಿಪಟ-2’ ಬಹುನಿರೀಕ್ಷಿತ ಚಿತ್ರವಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಮತ್ತೊಮ್ಮೆ ಈ ಚಿತ್ರ ಹೆಸರು ತಂದುಕೊಡಲಿದ್ದು, ನಿರ್ದೇಶಕ ಯೋಗರಾಜ್ ಭಟ್ ಅವರಿಗೂ ಇದು ಮಹತ್ವದ ಚಿತ್ರವಾಗಿದೆ ಎಂದರು.

ಈಗಾಗಲೇ ಈ ಚಿತ್ರದ ನಾಲ್ಕು ಹಾಡುಗಳು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಅಪಾರ ಜನಪ್ರಿಯತೆ ಪಡೆದಿವೆ. ಚಿತ್ರದ ಟ್ರೇಲರ್ ಕೂಡ ಪ್ರೇಕ್ಷಕರ ಮನಗೆದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗಳ ಸುರಿಮಳೆ ಆಗುತ್ತಿದೆ. ಚಿತ್ರದ ಒಂದೊಂದು ದೃಶ್ಯಗಳೂ ಅದ್ಭುತವಾಗಿ ಮೂಡಿಬಂದಿವೆ ಎಂದರು.

ಸೂರಜ್‌ ಪ್ರೊಡಕ್ಷನ್‌ ನಿರ್ಮಾಣ ಮಾಡಿರುವ ಚಿತ್ರದಲ್ಲಿ ಅನಂತನಾಗ್‌, ‘ಗೋಲ್ಡನ್ ಸ್ಟಾರ್’ ಗಣೇಶ್‌, ದಿಗಂತ್‌, ಪವನ್‌ ಕುಮಾರ್‌, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ರಂಗಾಯಣ ರಘು, ನಿಶ್ಚಿಕಾ ನಾಯ್ಡು, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್‌, ಪದ್ಮಜಾ ರಾವ್ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT