ಶಿಕಾರಿಪುರ: ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದ ಶಿವಯೋಗಾಶ್ರಮದಲ್ಲಿ ಜಾತ್ರಾ ಮಹೋತ್ಸವ ಪ್ರಯುಕ್ತ ಈಚೆಗೆ ಪ್ರೊ.ಕೃಷ್ಣೇಗೌಡರ ಹಾಸ್ಯ ಕಾರ್ಯಕ್ರಮ ಹಾಗೂ ಕುಮದ್ವತಿ–ವೃಷಭ ನದಿ ಸಂಗಮದಲ್ಲಿ ಗಂಗಾರತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕಾಳೇನಹಳ್ಳಿ ಶಿವಯೋಗಾಶ್ರಮದ ಪೀಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ‘ಮಾನಸಿಕ ಒತ್ತಡ ಕಡಿಮೆ ಮಾಡಲು ಹಾಸ್ಯ ಕಾರ್ಯಕ್ರಮ ಪೂರಕವಾಗಿದೆ. ಉತ್ತಮ ಆರೋಗ್ಯ ಹೊಂದಲು ನಗು ಸಹಕಾರಿ. ಎಲ್ಲರನ್ನೂ ನಗಿಸುವ ಕಾರ್ಯದಲ್ಲಿ ನಿರತರಾದ ಪ್ರೊ.ಕೃಷ್ಣೇಗೌಡರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನತೆ ಸಾಹಿತ್ಯಿಕ ಸಾಂಸ್ಕೃತಿಕ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಜೀವನದಲ್ಲಿ ಮುಖ್ಯವಾದ ಗಂಗೆಯನ್ನು ಪೂಜಿಸಲು ಗಂಗಾರತಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.
ಪ್ರೊ. ಕೃಷ್ಣೇಗೌಡರನ್ನು ಸನ್ಮಾನಿಸಲಾಯಿತು.
ತೊಗರ್ಸಿ ಮಳೆ ಹಿರೇಮಠದ ಪೀಠಾಧ್ಯಕ್ಷ ಮಹಾಂತದೇಶಿಕೇಂದ್ರ ಸ್ವಾಮೀಜಿ, ತಿಪ್ಪಾಯಿಕೊಪ್ಪ ಮೂಕಪ್ಪ ಶಿವಯೋಗಿ ಮಠದ ಮಹಾಂತ ಮಂದಾರ ಸ್ವಾಮೀಜಿ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಅಖಿಲ
ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ವಿ.ಈರೇಶ್, ಕಾಳೇನಹಳ್ಳಿ ಮಠದ ಆಡಳಿತಾಧಿಕಾರಿ ಹಿರೇಮಠ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.