ಭದ್ರಾವತಿ: ಹಳೆ ನಗರದ ಕಾಳಿಕಾಂಬ ರಸ್ತೆಯಲ್ಲಿರುವ ಕೇಶವಮೂರ್ತಿ ಅವರ ಮನೆಯಲ್ಲಿ ಶುಕ್ರವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ.

ಕೇಶವ ಹಾಗೂ ಅವರ ಪತ್ನಿ ಕನಕಲಕ್ಷ್ಮಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗೋಬಿ ಮಂಚೂರಿ ಅಂಗಡಿ ಮಾಲೀಕರಾಗಿರುವ ಕೇಶವ ಅವರು ಸಂಜೆ ಅಂಗಡಿಗೆ ಸಾಮಗ್ರಿ ತೆಗೆದುಕೊಂಡು ಹೋಗುವ ಮುನ್ನ ಬಚ್ಚಲು ಮನೆಯಲ್ಲಿ ಸಿಲಿಂಡರ್ ಆನ್ ಮಾಡಿದಾಗ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ಠಾಣಾಧಿಕಾರಿ ವಸಂತಕುಮಾರ್, ಸಿಬ್ಬಂದಿ ಬಾಬುಗೌಡ, ಸುರೇಶ್, ರಾಜ ನಾಯ್ಕ ಮತ್ತು ಬಾಬಲು ಮಾನಿಕ ಬಾಯಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮನೆಯ ಸ್ವತ್ತುಗಳು ಬೆಂಕಿಗೆ ಆಹುತಿಯಾಗಿ ಅಂದಾಜು ₹ 50,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.