ಶಕ್ತಿ, ಗೃಹ ಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳು ರಾಜ್ಯದಲ್ಲಿ ಜಾರಿಗೊಂಡಿದ್ದು ಈ ಐದು ಗ್ಯಾರಂಟಿ ಯೋಜನೆಯ ಲಾಭವು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಈ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸರ್ಕಾರ ರಚನೆ ಮಾಡಿದೆ. ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರ ನೇಮಕ ಮಾಡಿದೆ. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ.