ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಮ್ಮೆಹಟ್ಟಿಗೆ ಗೀತಾ-ಶಿವರಾಜಕುಮಾರ್ ದಂಪತಿ ಭೇಟಿ ನಾಳೆ

ಅಪಘಾತದಲ್ಲಿ ಮೃತಪಟ್ಟವರಿಗೆ ₹ 1 ಲಕ್ಷ ಪರಿಹಾರ ವಿತರಣೆ
Published 7 ಜುಲೈ 2024, 15:58 IST
Last Updated 7 ಜುಲೈ 2024, 15:58 IST
ಅಕ್ಷರ ಗಾತ್ರ

ಶಿವಮೊಗ್ಗ: ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿ ಗ್ರಾಮದ 13 ಮಂದಿಯ ಕುಟುಂಬಗಳಿಗೆ ನಟ ಶಿವರಾಜಕುಮಾರ್ ಹಾಗೂ ಗೀತಾ ದಂಪತಿ ಸೋಮವಾರ ತಲಾ 1 ಲಕ್ಷ ಪರಿಹಾರ ವಿತರಣೆ ಮಾಡಲಿದ್ದಾರೆ.

ಎಮ್ಮೆಹಟ್ಟಿಗೆ ಬೆಳಿಗ್ಗೆ 11.30ಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಿರುವ ದಂಪತಿ, ಪರಿಹಾರ ಮೊತ್ತ ವಿತರಣೆ ಮಾಡಲಿದ್ದಾರೆ.

ಈಚೆಗೆ ಎಮ್ಮೆಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಗೀತಾ ಹಾಗೂ ಶಿವರಾಜ್ ಕುಮಾರ್ ದಂಪತಿ ಮೃತರ ಕುಟುಂಬದವರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುವ ವಿಷಯ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT