ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿ ಅನುಷ್ಠಾನ ಪೂರ್ವದಲ್ಲಿ ಮತ್ತು ಅನುಷ್ಠಾನದ ವೇಳೆ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಚರ್ಚಿಸಿ ಯೋಜನೆ ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಭಾನುವಾರ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ, ನಂತರ ಅವರು ಮಾತನಾಡಿದರು.

ಸ್ಥಳೀಯರ ಅಭಿಪ್ರಾಯಗಳನ್ನು ಸ್ವೀಕರಿಸಿದ ಬಳಿಕ ಕಾಮಗಾರಿ ಆರಂಭಿಸಿದರೆ ಜನರಿಗೆ ಉಪಯೋಗವಾಗುವ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಿದೆ. ಆರಂಭದಲ್ಲಿ ಕುಂಟುತ್ತಾ ಸಾಗುತ್ತಿದ್ದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಕಳೆದ 6 ತಿಂಗಳಿನಿಂದ ಚುರುಕಿನಿಂದ ನಡೆಯುತ್ತಿದೆ ಎಂದರು.

ನಗರದ ಮಧ್ಯ ಭಾಗದಲ್ಲಿ ಹರಿದು ಹೋಗಿರುವ ಚಾನೆಲ್‍ಗಳನ್ನು ಸ್ವಚ್ಛಗೊಳಿಸುವ ಕುರಿತು ಜಿಲ್ಲಾಧಿಕಾರಿ ಅವರು ಮೂರು ದಿನಗಳ ಒಳಗಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳುವರು. ಚಾನೆಲ್‍ನಲ್ಲಿ ತಿಳಿಯಾದ ನೀರು ಸದಾ ಕಾಲ ನಿಲ್ಲುವಂತೆ ಮಾಡಲು ಬ್ಯಾರೇಜ್ ನಿರ್ಮಾಣ ಸೇರಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ 20 ಸಾವಿರ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಹಂತದಲ್ಲಿದೆ. ಅದರ ಸರಿಯಾದ ನಿರ್ವಹಣೆಗೂ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ನೆಹರೂ ಕ್ರೀಡಾಂಗಣ, ಜಯನಗರ ಕನ್ಸರ್‌ವೆನ್ಸಿ ಕಾಮಗಾರಿ, ರಾಜೇಂದ್ರ ನಗರ ಚಾನೆಲ್ ಬಳಿಯ ಕಾಮಗಾರಿ, ವಿನಾಯಕ ಪಾರ್ಕ್ ಬಸವನಗುಡಿ ಮತ್ತು ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಡಿಜಿಟಲ್ ಲೈಬ್ರರಿ ಯೋಜನೆ ಅನುಷ್ಠಾನದ ಪರಿಶೀಲನೆ ನಡೆಸಿದರು.

ನೆಹರೂ ಕ್ರೀಡಾಂಗಣದಲ್ಲಿ ಕಾಮಗಾರಿ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ನಾಗರಿಕರು ಕ್ರೀಡಾಂಗಣ
ದಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ, ಬೆಳಕಿನ ವ್ಯವಸ್ಥೆ, ಅಗತ್ಯವಿರುವ ಎಲ್ಲಾ ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿರಿಸಲು ಕ್ರಮ, ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಸೇರಿ ಹಲವು ಬೇಡಿಕೆಗಳನ್ನು ಮುಂದಿಟ್ಟರು. ಕ್ರೀಡಾಪಟುಗಳು, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವರು ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ತಾಕೀತು ಮಾಡಿದರು.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ ಕಾರ್ಯಾದೇಶ ನೀಡಲು ತಿಳಿಸಲಾಗಿದೆ ಎಂದರು.

ಸ್ಥಳ ಪರಿಶೀಲನೆಗೂ ಮೊದಲು ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಆಯುಕ್ತ ಚಿದಾನಂದ ವಟಾರೆ ಯೋಜನೆ ಅನುಷ್ಠಾನದ ಬಗ್ಗೆ ಸಚಿವರಿಗೆ ಮಾಹಿತಿ ಒದಗಿಸಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಉಪ ಮೇಯರ್ ಚನ್ನಬಸಪ್ಪ, ಯೋಜನಾ ನಿರ್ದೇಶಕ ಡಾ. ನಾಗೇಂದ್ರ ಹೊನ್ನಾಳ್ಳಿ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.